ಚಿಕ್ಕಬಳ್ಳಾಪುರ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಮತ್ತು ಏಕತೆಯನ್ನು ಕಾಪಾಡಲು ಕಾನೂನು ಅತ್ಯಗತ್ಯ ಎಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಶಿವಪ್ರಸಾದ್ ಅವರು ತಿಳಿಸಿದರು.
ನಗರದಲ್ಲಿರುವ ಆಶ್ರಿತ ಚಾರಿಟಬಲ್ ಟ್ರಸ್ಟ್ ಸಭಾಂಗಣದಲ್ಲಿ ಶನಿವಾರ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ವಿಕಲಚೇತನರ ಹಾಗೂ ಆಶ್ರಿತ ಚಾರಿಟಬಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆಯ ಅಂಗವಾಗಿ “ಕಾನೂನು ಅರಿವು ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯು ಸಹ ಒಂದಲ್ಲ ಒಂದು ರೀತಿಯಲ್ಲಿ ಕಾನೂನಿಗೆ ಒಳಗಾಗಿರುತ್ತಾರೆ. ಜೊತೆಗೆ ಹಿರಿಯ ನಾಗರೀಕರನ್ನು ಗೌರವಿಸುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರಸ್ತುತ ಕಾಲಘಟ್ಟದಲ್ಲಿ ಹಿರಿಯ ನಾಗರೀಕರಿಗೆ ಕಾನೂನಿನ ಅರಿವಿರಬೇಕು. ಜೊತೆಗೆ ಸಂವಿಧಾನತ್ಮಾಕ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷೀಕಾಂತ್ ಜೆ.ಮಿಸ್ಕಿನ್ ಅವರು ಮಾತನಾಡಿ, ಹಿರಿಯರು ಮಕ್ಕಳಿಗೆ ಜೀವನದ ಪಾಠ, ಸರಿ ತಪ್ಪುಗಳ ತಿಳುವಳಿಕೆಯನ್ನು ಮೂಡಿಸಬೇಕು. ಹಿರಿಯ ನಾಗರೀಕರ ಹಾಗೂ ಸಾರ್ವಜನಿಕರ ಬೆನ್ನೆಲುಬಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ. ಯಾವುದೇ ರೀತಿ ಸಮಸ್ಯೆಗಳನ್ನು ಕಾನೂನಿನಡಿಯಲ್ಲಿ ಇತ್ಯರ್ಥಪಡಿಸಲಾಗುತ್ತದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಕೆ.ವಿ.ಜ್ಯೋತಿ, ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಬಿ.ವಿ.ಕೃಷ್ಣಪ್ಪ, ಕಾರ್ಯದರ್ಶಿ ತಿರುಮಳಪ್ಪ, ಆಶ್ರಿತ ಚಾರಿಟಬಲ್ ಟ್ರಸ್ಟ್ ನ ವ್ಯವಸ್ಥಾಪಕರಾದ ನಾರಾಯಣಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಹಿರಿಯ ನಾಗರೀಕರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….