ಬೆಂ.ಗ್ರಾ.ಜಿಲ್ಲೆ: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು 2022-2023 ನೇ ಸಾಲಿನ “ವಿದ್ಯಾರ್ಥಿ ವೇತನ ಯೋಜನೆ” ಸೌಲಭ್ಯಕ್ಕಾಗಿ ಅರ್ಹ ನೇಕಾರರ ಮಕ್ಕಳಿಂದ ಅರ್ಜಿ ಅಹ್ವಾನಿಸಲಾಗಿದೆ.
ನೇಕಾರರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೊಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವ ವಿದ್ಯಾಲಯಗಳಲ್ಲಿ ಪದವಿಯ ಇತ್ಯಾದಿ, ಎಲ್.ಎಲ್.ಬಿ/ ಪ್ಯಾರಾ ಮೆಡಿಕಲ್/ ಬಿ.ಫಾರ್ಮ್/ ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ಗಳು, ಎಂ.ಬಿ.ಬಿಎಸ್/ ಬಿ.ಇ/ ಬಿ.ಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ಗಳನ್ನು ವ್ಯಾಸಾಂಗ ಮಾಡುತ್ತಿರುವ ನೇಕಾರರ ಮಕ್ಕಳಿಗೆ “ವಿದ್ಯಾರ್ಥಿ ವೇತನ” ನೀಡುವ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದೆ.
ಹಂತ-1: ಇಲಾಖೆಯಲ್ಲಿ ಈಗಾಗಲೇ ನೇಕಾರ ಸಮ್ಮಾನ್ ಯೋಜನೆಯಡಿ ನೊಂದಾಯಿಸಲಾಗಿರುವ ಕೈಮಗ್ಗ ನೇಕಾರರು ಹಾಗೂ ಚಾಲ್ತಿಯಲ್ಲಿರುವ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಗಳ ಸಮೀಕ್ಷೆಯಲ್ಲಿ ಗುರುತಿಸಿರುವ ನೇಕಾರರ ಮಾಹಿತಿಯನ್ವಯ ನೇಕಾರರ ಮಕ್ಕಳನ್ನು ಗುರುತಿಸಲಾಗುವುದು.
ಹಂತ-2: ಆದುದರಿಂದ ರಾಜ್ಯದ ನೊಂದಾಯಿತ ನೇಕಾರರು ಅವರ ಮಕ್ಕಳನ್ನು ಗುರುತಿಸುವ ಸಲುವಾಗಿ ಆನ್ ಲೈನ್ ಮೂಲಕ “ಸೇವಾ ಸಿಂಧು” ತಂತ್ರಾಂಶದ ಕರ್ನಾಟಕ ಒನ್ ಮತ್ತು ಗ್ರಾಮ ಒನ್‌ರಲ್ಲಿ ಮಾತ್ರ ಈ ಸೇವೆ ಲಭ್ಯವಿರುತ್ತದೆ. ಅದರಂತೆ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿಯನ್ನು ಸಲ್ಲಿಸುವುದು.
ಹಂತ-3: ತದ ನಂತರ ವಿದ್ಯಾರ್ಥಿವೇತನಕ್ಕಾಗಿ ನೇಕಾರರ ಮಕ್ಕಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ದಲ್ಲಿ ಆನ್ ಲೈನ್ ಮೂಲಕ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವುದು.
ಹಂತ-4: ಸೇವಾ ಸಿಂಧು ಹಾಗೂ (SSP) ಪೋರ್ಟಲ್‌ನ ಮಾಹಿತಿ ಹೊಂದಾಣಿಕೆಯಾದ ನಂತರ ಸದರಿ ಯೋಜನೆಯ ಮಾರ್ಗಸೂಚಿಯನ್ವಯ Post Matric ಹಾಗೂ ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (ಡಿ.ಬಿ.ಟಿ) ಪದ್ದತಿಯ ಮೂಲಕ ವಿದ್ಯಾರ್ಥಿವೇತನದ ಮೊತ್ತವನ್ನು ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….