ದೊಡ್ಡಬಳ್ಳಾಪುರ: ನಗರದ ಪ್ರವಾಸಿ ಮಂದಿರ ವೃತ್ತದಲ್ಲಿ ಕಳೆದ 30 ನಿಮಿಷಗಳಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಕ್ಯಾಂಟರ್ ಒಂದು ರಸ್ತೆಯಲ್ಲಿ ಕೆಟ್ಟು ನಿಂತ ವೇಳೆ, 4 ಕಡೆಯಿಂದ ಒಂದೇ ಬಾರಿಗೆ ಸಾಗಲು ಮುಂದಾದ ವಾಹನಗಳಿಂದಾಗಿ ಏಕಾಏಕಿ ಟ್ರಾಫಿಕ್ ಜಾಮ್ ಉಂಟಾಗಿದೆ.
ವಾಹನ ದಟ್ಟಣೆಯಿಂದಾಗಿ ಹಿಂದೂಪುರ ರಾಜ್ಯ ಹೆದ್ದಾರಿ, ದೊಡ್ಡಬೆಳವಂಗಲ, ನಂದಿ ಬೆಟ್ಟದ ಮುಖ್ಯ ರಸ್ತೆಯಲ್ಲಿ ಸುಮಾರು ಅರ್ಧ ಕಿಲೋಮೀಟರ್ ಹೆಚ್ಚು ವಾಹನಗಳು ಸಾಲುಗಟ್ಟಿ ನಿಂತಿವೆ.
ಸ್ಥಳಕ್ಕೆ ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್ ನೇತೃತ್ವದ ಪೊಲೀಸರು, 112 ಸಿಬ್ಬಂದಿ ದೌಡಾಯಿಸಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲು ಶ್ರಮಿಸುತ್ತಿದ್ದಾರೆ.
ಬೆಳಗ್ಗೆ ಮತ್ತು ಸಂಜೆಯ ವೇಳೆ ವಾಹನ ದಟ್ಟಣೆಯಿಂದ ಪ್ರತಿನಿತ್ಯ ರೈಲ್ವೇ ಸ್ಟೇಷನ್, ಟಿಬಿ ವೃತ್ತ, ಡಿ.ಕ್ರಾಸ್ ಬಳಿ ಪದೇ ಪದೇ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಸಿಗ್ನಲ್ ದೀಪ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….