ಸೂಲಕುಂಟೆಯಲ್ಲಿ ಗೋ ಕಟ್ಟೆ ಒತ್ತುವರಿ ಆರೋಪ: ಖಾಸಗಿ ಸುದ್ದಿವಾಹಿನಿ ಸಂದರ್ಶನದಲ್ಲಿ ಸಚಿವ ಆರ್.ಅಶೋಕ್ ಗೆ ದೂರು..!

ದೊಡ್ಡಬಳ್ಳಾಪುರ: ತಾಲೂಕಿನ ಸೂಲಕುಂಟೆ ಗ್ರಾಮದಲ್ಲಿ ಕಂದಾಯ ದಾಖಲೆಯಲ್ಲಿನ ಗೋ ಕಟ್ಟೆಯನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿರುವ ಕುರಿತಂತೆ, ಖಾಸಗಿ ಸುದ್ದಿವಾಹಿನಿ ಸಂದರ್ಶನದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ದೂರು ನೀಡಿರುವ ಘಟನೆ ನಡೆದಿದೆ.

ಜೆಡಿಎಸ್ ವಕ್ತಾರರಾದ ವೀರಣ್ಣ ಎನ್ನುವವರು, ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಖಾಸಗಿ ಸುದ್ದಿವಾಹಿನಿ ನಡೆಸುತ್ತಿದ್ದ ಸಂದರ್ಶನ ನಡೆಸುತ್ತಿದ್ದ ವೇಳೆ, ಈ ಕುರಿತಂತೆ ಪ್ರಸ್ತಾಪಿಸಿದ್ದು, ಕಂದಾಯ ದಾಖಲೆಯಲ್ಲಿನ ಕೆರೆ, ಕಟ್ಟೆ, ಕುಂಟೆಗಳು ಜಲಮೂಲಗಳಾಗಿದ್ದು, ಇವುಗಳ ಸಂರಕ್ಷಣೆ ಕಂದಾಯ ಇಲಾಖೆ ಹೊಣೆಯಾಗಿದೆ.

ಆದರೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಸೂಲಕುಂಟೆ ಗ್ರಾಮದಲ್ಲಿ ಗೋಕಟ್ಟೆಯನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಿದ್ದು, ತಾಲೂಕು ಕಚೇರಿಯಿಂದ ಒತ್ತುವರಿಯಾಗಿರುವುದಾಗಿ ಟಿಪ್ಪಣಿಯನ್ನು ನೀಡಿದ್ದಾರೆ. ಆದರೆ ತೆರವು ಮಾಡಿಸುವಂತೆ ಅರ್ಜಿ ಸಲ್ಲಿಸಿ ಮೂರು ವರ್ಷ ಕಳೆದರು ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ. ಅಧಿಕಾರಿಗಳು ಶಾಮಿಲಾಗಿದ್ದಾರೆ. ಈ ಕುರಿತು ಸಚಿವರು ಕ್ರಮಕೈಗೊಂಡು ಜಲಮೂಲಗಳನ್ನು ರಕ್ಷಿಸುವಂತೆ ವೀರಣ್ಣ ಒತ್ತಾಯಿಸಿದ್ದಾರೆ.

ಈ ವೇಳೆ ಮಾತನಾಡಿರುವ ಕಂದಾಯ ಸಚಿವ ಆರ್.ಅಶೋಕ್, ಮಹಾತ್ಮ ಗಾಂಧಿ ಅವರು ಹೇಳಿದಂತೆ ಗಾಳಿ, ನೀರು, ಬೆಳಕು ನಮ್ಮ ಅಪ್ಪನ ಸ್ವತ್ತಲ್ಲ. ಅದನ್ನು ಹಾಳು ಮಾಡದೆ ಮುಂದಿನ ಜನಾಂಗಕ್ಕೆ ನೀಡುವ ಹೊಣೆಗಾರಿಕೆ ನಮ್ಮದಾಗಿದೆ. ಕೆರೆಗಳನ್ನು ಒತ್ತುವರಿ ಮಾಡಿಕೊಳ್ಳುವವರು ಪಾಪಿಗಳು, ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕಿದೆ. ಆದರೆ ನ್ಯಾಯಾಲಯದಲ್ಲಿ ಸ್ಟೇ ತರುತ್ತಾರೆ. ಜನ ಮತ್ತು ಮಂತ್ರಿಗಳು ಕೆರೆಯನ್ನು ನಮ್ಮ ಜೀವನ ಎಂದು ತಿಳಿದುಕೊಳ್ಳಬೇಕು. 

ಯಾವುದೇ ಕೆರೆಯ ಒಂದು ಇಂಚು ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ಬಿಡಬಾರದು. ನಾನು ಇದರ ಪರವಾಗಿದ್ದು, ಕಾನೂನು ತಿದ್ದುಪಡಿ ಮಾಡಿಯಾದರು ಕೆರೆಗಳ ಒತ್ತುವರಿ ಮಾಡಿದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದಿದ್ದಾರೆ.

ಪೋಟೋ ಕೃಪೆ: ಏಷ್ಯಾನೆಟ್ ಸುವರ್ಣ ನ್ಯೂಸ್.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!