
ದೊಡ್ಡಬಳ್ಳಾಪುರ: ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ದೇಶದ ಜನರಿಗೆ ಗಣ್ಯರು ಶುಭ ಹಾರೈಸಿದ್ದಾರೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ, ಶಾಸಕ ಟಿ.ವೆಂಕಟರಮಣಯ್ಯ ದೀಪಾವಳಿ ಹಬ್ಬದ ಶುಭಕಾಮನೆಗಳನ್ನು ತಿಳಿಸಿದ್ದಾರೆ.

ರಾಷ್ಟ್ರಪತಿ: ಬೆಳಕಿನ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಮುರ್ಮು ಟ್ವೀಟ್ ಮಾಡಿದ್ದು, ಎಲ್ಲಾ ದೇಶವಾಸಿಗಳಿಗೆ ದೀಪಾವಳಿಯ ಶುಭಾಶಯಗಳು! ಬೆಳಕು ಮತ್ತು ಸಂತೋಷದ ಈ ಪವಿತ್ರ ಹಬ್ಬದಂದು, ಜ್ಞಾನ ಮತ್ತು ಶಕ್ತಿಯ ದೀಪವನ್ನು ಬೆಳಗಿಸುವ ಮೂಲಕ ಅಗತ್ಯವಿರುವವರ ಜೀವನದಲ್ಲಿ ಸಂತೋಷವನ್ನು ತರಲು ಪ್ರಯತ್ನಿಸೋಣ. ಈ ಮಹಾನ್ ಹಬ್ಬದಂದು, ನಾನು ಎಲ್ಲಾ ದೇಶವಾಸಿಗಳ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.

ಪ್ರಧಾನಿ: ನರೇಂದ್ರ ಮೋದಿ ಸಹ ರಾಷ್ಟ್ರದ ಎಲ್ಲ ಪ್ರಜೆಗಳು ಹಾಗೂ ನಾಗರಿಕರಿಗೆ ಬಣ್ಣಗಳ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ದೀಪಾವಳಿಯು ಹೊಳಪು ಮತ್ತು ಕಾಂತಿಯೊಂದಿಗೆ ಸಂಬಂಧಿಸಿದೆ. ಈ ಪವಿತ್ರ ಹಬ್ಬವು ನಮ್ಮ ಜೀವನದಲ್ಲಿ ಸಂತೋಷ ಮತ್ತು ಯೋಗಕ್ಷೇಮದ ಉತ್ಸಾಹವನ್ನು ಹೆಚ್ಚಿಸಲಿ. ನೀವು ಕುಟುಂಬ ಮತ್ತು ಸ್ನೇಹಿತರೊಂದಿಗೆ ಅದ್ಭುತವಾದ ದೀಪಾವಳಿ ಸಂಭ್ರಮವನ್ನು ಪಡೆದುಕೊಂಡಿದ್ದೀರಿ ಎಂದುು ನಾನು ಭಾವಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸಿಎಂ: ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸರ್ವರ ಬಾಳಲ್ಲಿ ಸಂಕಷ್ಟಗಳು ದೂರವಾಗಿ, ಸುಖ, ಶಾಂತಿಃ ಹಾಗೂ ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಶಾಸಕ: ಟಿ.ವೆಂಕಟರಮಣಯ್ಯ ಅವರು ತಾಲೂಕಿನ ಜನತೆಗೆ ಬೆಳಕಿನ ಹಬ್ಬಕ್ಕೆ ಶುಭಾಶಯಗಳನ್ನು ಕೋರಿದ್ದು, ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಬಾಳಿನಲ್ಲಿ ಸುಖ, ಶಾಂತಿ, ಸಮೃದ್ಧಿ, ನೆಮ್ಮದಿ, ಆರೋಗ್ಯ, ಭಾಗ್ಯವನ್ನು ನೀಡಿ ಇಷ್ಟಾರ್ಥವನ್ನು ಈಡೇರಿಸುವುದರೊಂದಿಗೆ ಭಗವಂತ, ನಮಗೆ ಮತ್ತು ನಿಮಗೆ ಒಳಿತು ಮಾಡಲಿ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
