ದೊಡ್ಡಬಳ್ಳಾಪುರ: ಭಾರೀ ಮಳೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಚಳಿಗೆ ಗಡಗಡ ನಡಗುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಭಾರೀ ಕುಸಿತವಾಗಿದ್ದು, ದೊಡ್ಡಬಳ್ಳಾಪುರ ಸೇರಿದಂತೆ ರಾಜ್ಯಾದ್ಯಂತ ಚಳಿ ತೀವ್ರವಾಗಿದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಕನಿಷ್ಟ ತಾಪಮಾನದಲ್ಲಿ ಇಳಿಕೆ ದಾಖಲಾಗಿದೆ.
ರಾಜ್ಯದ ಶೇ.73 ರಷ್ಟು ಭೂ ಭಾಗದಲ್ಲಿ 12 ರಿಂದ16 ಡಿಗ್ರಿ ಸೆಲ್ಸಿಯಸ್ ತನಕ ಕನಿಷ್ಟ ತಾಪಮಾನ ದಾಖಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೀದರ್, ವಿಜಯಪುರ, ಕಲಬುರಗಿ, ಮಂಡ್ಯ, ಕೊಡಗು ಜಿಲ್ಲೆಯ ಅನೇಕ ಕಡೆ ಕನಿಷ್ಟ 10.9 ರಿಂದ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಕುಸಿದಿದೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

