ಬೆಂ.ಗ್ರಾ.ಜಿಲ್ಲೆ(ಅ.27): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರ/ಸ್ನಾತಕೋತ್ತರ ಪದವೀಧರರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯಲ್ಲಿ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ ನಲ್ಲಿಸುವುದು.
ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ತರಬೇತಿಯ ಅವಧಿ ವೇಳೆ ಮಾಹೆಯಾನ 15 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುವುದು.
ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ. ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ದೇವನಹಳ್ಳಿ,ದೊಡ್ಡಬಳ್ಳಾಪುರ,ನಲಮಂಗಲ ಹಾಗೂ ಹೊಸಕೋಟೆ ತಾಲೂಕಿನ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ನವೆಂಬರ್ 14, 2022 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎರಡನೇ ಮಹಡಿ, ನಂ.17 ವಾರ್ತಾಸೌಧ,ಇನ್‌ಫಂಟ್ರಿ ರಸ್ತೆ-ಬೆಂಗಳೂರು-01 ಅಥವಾ ಮೊಬೈಲ್ ಸಂಖ್ಯೆ-9480841249 ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕ ಮಂಜುನಾಥ ಡೊಳ್ಳಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

