
ಚೆನ್ನೈ: ಕಾಂತಾರ ಸಿನಿಮಾ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರು ಸೂಪರ್ ಸ್ಟಾರ್ ರಜನಿಕಾಂತ್ ಭೇಟಿಯಾಗಿದ್ದಾರೆ. ಇತ್ತೀಚೆಗೆ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಕಾಂತಾರ ಚಿತ್ರ ನೋಡಿ ಟ್ವೀಟ್ ಮಾಡಿದ್ದಾಗ ರಿಷಬ್ ಪುಳಕಗೊಂಡಿದ್ದರು. ಇದೀಗ ರಿಷಬ್ ಅವರು ರಜಿನಿಕಾಂತ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

ಕಾಂತಾರ ಚಿತ್ರ ವೀಕ್ಷಿಸಿದ್ದ ರಜನಿಕಾಂತ್. ರಿಷಬ್ ಶೆಟ್ಟಿ ಅವರಿಗೆ ಕರೆ ಮಾಡಿದ್ದು, ಸ್ವತಃ ರಿಷಬ್ ಅವರನ್ನು ತಮ್ಮ ಮನೆಗೆ ಕರೆದು ಸನ್ಮಾನ ಮಾಡಿದ್ದಾರೆ.

ರಿಷಬ್ ಶೆಟ್ಟಿ, ಕೆಲ ಸಮಯ ರಜನಿಕಾಂತ್ ಅವರ ಜೊತೆ ಮಾತನಾಡಿ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಕೃತಜ್ಞತೆಯನ್ನೂ ಹೇಳಿದ್ದಾರೆ. ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ರಜನಿ ಮಾತು ಕೇಳಿ ರಿಷಬ್ ಕೂಡ ಖುಷ್ ಆಗಿದ್ದಾರೆ.
ಈ ಹಿಂದೆ ರಜನಿ ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
