ಮಲ್ಲೇಶ್ವರಂ ಮಾದರಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, (ಅ.29): ಆಧುನಿಕ  ವ್ಯವಸ್ಥೆಗಳನ್ನು ಒದಗಿಸುವ ಮೂಲಕ ಕರ್ನಾಟಕದ ಸರ್ಕಾರಿ  ಶಾಲೆಗಳಲ್ಲಿ ಮಲ್ಲೇಶ್ವರಂ ಮಾದರಿಯನ್ನು  ಅನುಸರಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 

ಅವರು ಇಂದು ಮಲ್ಲೇಶ್ವರಂ 18ನೇ ಕ್ರಾಸ್ ಬಳಿ ಇರುವ ಸರ್ಕಾರ ಪ್ರೌಢಶಾಲೆ ಇಲ್ಲಿ ಆಯೋಜಿಸಿದ್ದ ಮಲ್ಲೇಶ್ವರಂ ಸ್ಕೂಲ್ ಮಾಡೆಲ್ ಹಾಗೂ ಪುನೀತ್ ಸ್ಯಾಟಿಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿ  ಮಾತನಾಡಿದರು.

ಮಲ್ಲೇಶ್ವರಂ ಮಾದರಿ ಶಾಲೆಯಲ್ಲಿ ಮಕ್ಕಳೇ ತಯಾರಿಸಿರುವ ಸ್ಯಾಟಿಲೈಟ್ ಇಂದು  ಅನಾವರಣವಾಗಿದೆ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ಆಗಿದ್ದು. ಬಹಳ ಯೋಗ್ಯ ವ್ಯಕ್ತಿಯ ಹೆಸರಿನಲ್ಲಿ ಕೆಲಸವಾಗುತ್ತಿದೆ ಎಂದರು. 

ಆಕಾಶದೆತ್ತರಕ್ಕೆ ಮಲ್ಲೇಶ್ವರಂ ಶಾಲೆಯ ಖ್ಯಾತಿ ಏರಲಿ: ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯಂದು ಅವರಿಗೆ ಗೌರವ ಸಮರ್ಪಣೆ ಮಾಡುವ ರೀತಿಯಲ್ಲಿ ಈ ಸ್ಯಾಟಿಲೈಟ್ ನ್ನು ಗಗನಕ್ಕೇರಿಸುವ ಕೆಲಸ ಶ್ಲಾಘನೀಯ. ಆಕಾಶದೆತ್ತರಕ್ಕೆ ಮಲ್ಲೇಶ್ವರಂ ಶಾಲೆಯ ಖ್ಯಾತಿ ಏರಲಿ ಎಂದರು. ಪುನೀತ್ ರಾಜ್ ಕುಮಾರ್ ಅವರು ಸದಾ ಹೊಸತನ್ನು ಹುಡುಕುವ, ಪ್ರಯೋಗಶೀಲ, ಅಂತ:ಕರಣವುಳ್ಳ ವ್ಯಕ್ತಿ. ಅತ್ಯಂತ ಸಣ್ಣ ವಯಸ್ಸಿನಲ್ಲೇ ಈ ಲೋಕ ಬಿಟ್ಟರೂ ಅವರು ಬದುಕಿದ ಕೆಲ ದಿನಗಳಲ್ಲಿ ತಮ್ಮ ಹೆಜ್ಜೆ ಗುರುತುಗಳನ್ನು ಭೂಮಿಯಲ್ಲಿ ಬಿಟ್ಟುಹೋಗಿದ್ದಾರೆ. ಪರೋಪಕಾರಿ ಕಾರ್ಯಗಳು, ವಿದ್ಯಾಭ್ಯಾಸ ನೀಡುವ ಸಂಸ್ಥೆ, ಅನಾಥ ಮಕ್ಕಳ ಶಕ್ತಿ ಧಾಮ, ಸಹಾಯ, ನಗುಮುಖದಿಂದ ಎಲ್ಲರ ದುಃಖ ದುಮ್ಮಾನಗಳನ್ನು ದೂರ ಮಾಡಿದ್ದಾರೆ. ಅವರು ನಮ್ಮ ಜೊತೆಗೆ ಎಂದಿಗೂ ಇರುತ್ತಾರೆ. ರಾಜ್ಯದ ಉದ್ದಗಲಕ್ಕೂ ಅವರ ಖ್ಯಾತಿ ಪಸರಿಸಿದೆ. ಮಲ್ಲೇಶ್ವರಂ ಶಾಲೆ ಪುನೀತ್  ಖ್ಯಾತಿಯನ್ನು ಸ್ಯಾಟಿಲೈಟ್ ಮೂಲಕ ಆಕಾಶದೆತ್ತರಕ್ಕೆ  ಕೊಂಡೊಯ್ಯುತ್ತಾರೆ ಎಂದು ನಂಬಿದ್ದೇನೆ  ಎಂದರು.

ಪ್ರಾಥಮಿಕ ಶಿಕ್ಷಣ ದಲ್ಲಿ ನೈತಿಕ ಮೌಲ್ಯ: ಶಿಕ್ಷಣ ಬಹಳ ಮುಖ್ಯ. 21 ನೇ ಶತಮಾನ ಜ್ಞಾನದ ಶತಮಾನ. ಜ್ಞಾನಾರ್ಜನೆ ಬಹಳ ಮುಖ್ಯ ವಾಗುತ್ತದೆ. ಕಲಿಯುವಾಗ ಗುಣಾತ್ಮಕ ಹಾಗೂ  ನೈತಿಕ ವಿದ್ಯೆಯನ್ನು ಕಲಿಯಬೇಕು. ವಿಜ್ಞಾನ ಮತ್ತು ಗಣಿತವನ್ನು ಎಲ್ಲರೂ ಕಲಿಯಲೇಬೇಕು. ಎಲ್ಲರ ಜೀವನದಲ್ಲಿ ಇವು ಉಪಯೋಗಕ್ಕೆ ಬರುತ್ತವೆ. ವಿಜ್ಞಾನ ಮತ್ತು ಗಣಿತದಲ್ಲಿ  ಭದ್ರ ಬುನಾದಿ ಹಾಕಲು ಭಾಷೆಯಲ್ಲಿಯೂ ಭದ್ರ ಬುನಾದಿಯನ್ನು ಹಾಕಬೇಕು. ಮಾತೃಭಾಷೆ ಸಹಜವಾಗಿ ಬರುವ ಭಾಷೆ. ಅದನ್ನು ಅಚ್ಚುಕಟ್ಟಾಗಿ ಕಲಿತರೆ ನಮ್ಮ ಜ್ಞಾನ ಉತ್ತಮಗೊಳ್ಳುತ್ತದೆ. ಪ್ರಶ್ನೆ ಕೇಳುವ ಹಕ್ಕು ಮಕ್ಕಳಿಗಿದೆ. ಮಕ್ಕಳು ಪ್ರಶ್ನೆ ಕೇಳಬೇಕು. ಶಿಕ್ಷಕರು ಕಲಿತು ಮಕ್ಕಳ ಉತ್ಸಾಹವನ್ನು ಪ್ರೋತ್ಸಾಹ ಮಾಡಬೇಕು. ಮಕ್ಕಳ ಗ್ರಹಣಶಕ್ತಿ ಹೆಚ್ಚಿರುವುದರಿಂದ ನೈತಿಕ ಮೌಲ್ಯ, ಭಾಷೆ, ವಿಜ್ಞಾನ ಹಾಗೂ ಗಣಿತವನ್ನು ಮೂಲಭೂತವಾಗಿ ಪ್ರಾಥಮಿಕ ಶಿಕ್ಷಣದಲ್ಲಿ ಕಲಿಸಬೇಕು. ಉನ್ನತ ಶಿಕ್ಷಣ ಕಲಿಯುವಾಗ  ಮಕ್ಕಳಿಗೆ ಅನುಕೂಲವಾಗುತ್ತದೆ ಎಂದರು. 

ತರ್ಕಬದ್ಧವಾಗಿ ಆಲೋಚಿಸಿ: ಮಕ್ಕಳು ತರ್ಕಬದ್ಧವಾಗಿ ಯೋಚಿಸಬೇಕು. ಯಾಕೆ, ಏನು, ಎಲ್ಲಿ ಹೇಗೆ ಎಂದು ಪ್ರಶ್ನಿಸಬೇಕು. ಆಗ ತರ್ಕಬದ್ಧವಾಗಿ ಯೋಚಿಸಬಹುದು. ಬಾಯಿಪಾಠದ ಅಗತ್ಯವಿರುವುದಿಲ್ಲ. ಈ ಪಂಚಪ್ರಶ್ನೆಗಳು ಮಕ್ಕಳ ಯಶಸ್ಸಿನ ಮೆಟ್ಟಿಲುಗಳು. ಕಠಿಣ ಗಣಿತವನ್ನು ನಾಲ್ಕು ಜನರಿಗೆ ಹೇಳಿಕೊಟ್ಟರೆ, ಅದನ್ನು ಮರೆಯುವ ಪ್ರಮೇಯವೇ ಇರುವುದಿಲ್ಲ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರಲ್ಲದೇ  ಜ್ಞಾನ ಹಂಚಿಕೊಂಡಷ್ಟೂ ಗಟ್ಟಿಯಾದ ಜ್ಞಾನದ ಭಂಡಾರ ಉಳಿಯಲಿದೆ ಎಂದರು. 

ಉಜ್ವಲ ಭವಿಷ್ಯ: ಮಕ್ಕಳನ್ನು ಕಂಡಾಗ ಭಾರತ ಹಾಗೂ ಕನ್ನಡ ನಾಡಿನ ಭವಿಷ್ಯ ಉಜ್ವಲವಾಗಿದೆ ಎಂದು ಅನಿಸುತ್ತದೆ. ಮಕ್ಕಳಲ್ಲಿ  ಉತ್ಸಾಹ, ಕುತೂಹಲ ಬಹಳ ಮುಖ್ಯ. ಮಕ್ಕಳಲ್ಲಿ ಕುತೂಹಲ ಹಾಗೂ ಮುಗ್ಧತೆ ಎರಡನ್ನೂ ಜೀವಂತವಾಗಿಡುವ ಶಿಕ್ಷಕ  ನಂಬರ್ ಒನ್ ಗುರುವಾಗುತ್ತಾರೆ ಎಂದು ಅಭಿಪ್ರಾಯ ಪಟ್ಟರು. 

ಸ್ಯಾಟಿಲೈಟ್ ನಿರ್ಮಾಣಕ್ಕೆ ಸರ್ಕಾರದ ಸಹಾಯ: ವಿದ್ಯೆ ಶಕ್ತಿ ಮತ್ತು ಅವಕಾಶಗಳನ್ನು ನೀಡುತ್ತದೆ. ಎಷ್ಟೇ ದೊಡ್ಡ ಸ್ಥಾನ ದಲ್ಲಿದ್ದರೂ  ವಿದ್ಯೆ ಕಲಿಸಿದ ವಿನಯವನ್ನು ಬಿಟ್ಟುಕೊಡಬಾರದು. ಇತರರಿಗಾಗಿ ಬದುಕಿದಾಗ ಸುಖ, ಶಾಂತಿ,  ನೆಮ್ಮದಿಯ ಬದುಕು ನಮ್ಮದಾಗುತ್ತದೆ. ನಾಡಿನ ಭವ್ಯ ಭವಿಷ್ಯಕ್ಕೆ ತಂತ್ರಜ್ಞಾನ,  ನೈತಿಕತೆ, ವಿಜ್ಞಾನ ಸಹಾಯಕ. ಶಾಲೆಗಳಲ್ಲಿ ಬಹುಪಯೋಗಿ  ಸ್ಯಾಟಿಲೈಟ್ ನಿರ್ಮಾಣ ಮಾಡುವ ಅವಕಾಶವಿದ್ದು, ಅಗತ್ಯವಿರುವ ತರಬೇತಿ, ವಿನ್ಯಾಸಕ್ಕೆ ತಗಲುವ ವೆಚ್ಚವನ್ನು ರಾಜ್ಯ ಸರ್ಕಾರ  ಭರಿಸಲಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. 

ಮಲ್ಲೇಶ್ವರಂ ಎಂಬ  ಕುಟುಂಬದ ಮುಖ್ಯಸ್ಥ: ಸಿ.ಎನ್.ಅಶ್ವಥ್ ನಾರಾಯಣ್ ಅವರು ಮಲ್ಲೇಶ್ವರಂ ಎಂಬ ಕುಟುಂಬದ ಮುಖ್ಯಸ್ಥನಂತೆ ಕೆಲಸ ಮಾಡುತ್ತಿದ್ದಾರೆ. ಅಂತ:ಕರಣ ಎನ್ನುವುದು ಬಹಳ ಮುಖ್ಯ. ನಮಗೆ ಹುಟ್ಟಿದ ಮಕ್ಕಳು ಮಾತ್ರ ನಮ್ಮ ಮಕ್ಕಳು ಎನ್ನುವುದು ಸಂಕುಚಿತ ಭಾವನೆ. ನನ್ನ ಕ್ಷೇತ್ರದ ಎಲ್ಲಾ ಮಕ್ಕಳೂ ನನ್ನ ಮಕ್ಕಳು ಎಂದು ತಿಳಿದು, ಆ ಮಕ್ಕಳ  ಭವಿಷ್ಯಕ್ಕೆ ಶಾಲೆಗಳ ಅಭಿವೃದ್ಧಿ ಮಾಡುವುದು. ಕೇವಲ ಕಟ್ಟಡಗಳು ಮಾತ್ರವಲ್ಲ ಕಲಿಕಾ ವ್ಯವಸ್ಥೆ, ಆಧುನೀಕರಣ, ಡಿಜಿಟಲೀಕರಣ, ಅಗತ್ಯವಿರುವ ವೈಫೈ, ಬ್ರಾಡ್ ಬ್ಯಾಂಡ್ ಮುಂತಾದ ವ್ಯವಸ್ಥೆ, ಶಿಕ್ಷಕರನ್ನು ತಯಾರಿಸಿ,ಕಲಿಕೆಯಲ್ಲಿ ಆಸಕ್ತಿ ಹುಟ್ಟಿಸಿ ಮಕ್ಕಳ ಬುದ್ಧಿಶಕ್ತಿ, ಪ್ರತಿಭೆಯನ್ನು ಗುರುತಿಸಿ  ಪ್ರೋತ್ಸಾಹಿಸುವ ಕೆಲಸ ಆಗುತ್ತಿದೆ ಇಡೀ ರಾಜ್ಯಕ್ಕೇ ಈ ಶಾಲೆಯನ್ನು ಮಾದರಿಯಾಗಿಸಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]