
ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿನ ರೈಲ್ವೇ ನಿಲ್ದಾಣ ಬಳಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಟ್ರಾಫಿಕ್ ಜಾಮ್ ಉಂಟಾದ ಕಾರಣ ಬೆಂಗಳೂರು – ಹಿಂದುಪುರ ರಸ್ತೆ, ದೊಡ್ಡಬಳ್ಳಾಪುರ ನಗರ ರಸ್ತೆ ಹಾಗೂ ಸ್ಕೌಟ್ ಕ್ಯಾಂಪ್ ರಸ್ತೆಯಲ್ಲಿ ವಾಹನಗಳು ಸುಮಾರು ಒಂದು ಗಂಟೆ ಕಾಲ ಸಾಲುಗಟ್ಟಿ ನಿಂತಿವೆ.

ಸುಮಾರು ಒಂದು ಗಂಟೆಗಳಿಂದ ಜಾಮ್ ಉಂಟಾದ ಕಾರಣ ಕಚೇರಿಯಿಂದ ಮನೆಗೆ ತೆರಳುತ್ತಿರುವ ಉದ್ಯೋಗಿಗಳು, ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಯಿಂದ ಮನೆಗೆ ತೆರಳುವ ಕಾರ್ಮಿಕರು ಹಾಗೂ ಪ್ರಯಾಣಿಕರು ಬಸವಳಿಯುವಂತಾಗಿದೆ.
ಅವೈಜ್ಞಾನಿಕ ರಸ್ತೆ ವೃತ್ತದಿಂದಾಗಿ ಪ್ರತಿನಿತ್ಯ ಈ ರಸ್ತೆಯಲ್ಲಿ ಬೆಳಗ್ಗೆ ಮತ್ತು ಸಂಜೆ ತೀವ್ರವಾದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ.
ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳುವಂತೆ ಪ್ರಯಾಣಿಕರು, ವಾಹನ ಸವಾರರು ಒತ್ತಾಯಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
