ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆಗಳು ಉತ್ತಮ ಸಹಕಾರಿ ಎಂದು ಬೆಂಗಳೂರು ಗ್ರಾಮಾತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ರಾಮಕೃಷ್ಣ ತಿಳಿಸಿದರು.

ತಾಲೂಜಿನ ಮುಪ್ಪಡಿಘಟ್ಟ ಗ್ರಾಮದಲ್ಲಿ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ವಿಶೇಷ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮತ್ತು ನಾಗರಿಕ ಜವಾಬ್ದಾರಿಯನ್ನು ಬೆಳೆಸುತ್ತದೆ. ನಾಯಕತ್ವ ಗುಣವನ್ನು ರೂಢಿಸಿಕೊಳ್ಳುವುದರ ಜೊತೆಗೆ ಪ್ರಜಾಪ್ರಭುತ್ವದ ಆಶಯವನ್ನು ಅರ್ಥಮಾಡಿಸುತ್ತವೆ ಎಂದರು.

ಜಿಲ್ಲಾಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗೂ ಗ್ರಾಮೀಣ ಪರಿಸರದ ಅರಿವು ಬೇಕಾಗಿದೆ. ಇದರಿಂದ ನಮ್ಮ ದೇಶದ ವಾಸ್ತವ ಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಅನುಕೂಲವಾಗುತ್ತದೆ. ದೇಶದ ಸಮಗ್ರ ಪರಿಸ್ಥಿತಿಯನ್ನು ಅರಿತಾಗ ಮಾತ್ರ ಯುವ ಜನತೆಯಲ್ಲಿ ರಾಷ್ಟ್ರ ಪ್ರಜ್ಞೆ ಮತ್ತು ರಾಷ್ಟ್ರೀಯ ಭಾವೈಕ್ಯತೆ ಮೂಡಿಸಲು ಸಾಧ್ಯವೆಂದರು.
ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಸುಬ್ರಮಣ್ಯ ಮಾತನಾಡಿ, ಗ್ರಾಮೀಣ ಸಾಮಾಜಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಗ್ರಹಿಸಲು ವಿಶೇಷ ಶಿಬಿರಗಳು ಮಹತ್ವದ ಪಾತ್ರ ವಹಿಸುತ್ತವೆ. ಶಿಬಿರದಲ್ಲಿ ಪ್ರತಿದಿನ ನಡೆಯುವ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗಹಿಸಬೇಕೆಂದರು.
ಕಾರ್ಯಕ್ರಮದಲ್ಲಿ ಕಾಡನೂರು ಗ್ರಾಮಪಂಚಾಯಿತಿ ಅಧ್ಯಕ್ಷ ಲಕ್ಕಪ್ಪ, ಅಭಿವೃದ್ದಿ ಅಧಿಕಾರಿ ಸೂರ್ಯನಾರಾಯಣ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಚೆನ್ನಮ್ಮ ರಾಮಲಿಂಗಯ್ಯ, ಗ್ರಾಮದ ಮುಖಂಡರುಗಳಾದ ಬಿ.ಕೆ.ಹುಚ್ಚಯ್ಯ, ಎಂ.ಜಿ.ಕೆಂಪೇಗೌಡ, ಎಂ.ಜಿ.ಆನಂದ್, ರಾಜಕುಮಾರ್, ತ್ರಿವೇಣಿ, ಪಾಪಯ್ಯ, ಪುರುಷೋತ್ತಮ ಬಾಬು, ಶಿವಕುಮಾರ್, ರಾಷ್ಟ್ರೀಯ ಸೇವಾಯೋಜನಾಧಿಕಾರಿ ಟಿ.ವಿ.ರಾಧ, ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
