ಸರಣಿ ಕಳ್ಳತನ: ರಕ್ಷಣೆ ಕೋರಿ ದೊಡ್ಡಬಳ್ಳಾಪುರ ತಾಲೂಕು ಕಚೇರಿಗೆ ಬಂದ ಕುರಿ-ಮೇಕೆಗಳು..!!

ದೊಡ್ಡಬಳ್ಳಾಪುರ: ಕಳೆದ ದಿನಗಳಿಂದ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುತ್ತಿರುವ ಕುರಿ-ಮೇಕೆಗಳ ಸರಣಿ ಕಳ್ಳತನದ ಹಿನ್ನಲೆಯಲ್ಲಿ, ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ಹಾಗೂ ಕಳ್ಳತನದ ಕುರಿತು ತನಿಖೆಗೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಆವರಣದಲ್ಲಿ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಮುಖಂಡರಾದ ರಾಜಘಟ್ಟರವಿ, ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮಗಳಲ್ಲಿ, ಹಲವು ಕುರಿಗಳನ್ನು ರಾತ್ರೋರಾತ್ರಿ ಕಳ್ಳರು ದೋಚಿಕೊಂಡು ಹೋಗಿದ್ದಾರೆ. ಪದೇ ಪದೇ ಕುರಿ ಕಳವು ಪ್ರಕರಣಗಳು ವರದಿಯಾಗುತ್ತಿದ್ದರೂ ಇದುವರೆವಿಗೂ ಕಳ್ಳರ ಸುಳಿವು ಕೂಡ ಸಿಕ್ಕಿಲ್ಲ.

ಕುರಿ ಸಾಕಾಣಿಕೆಯನ್ನು ಕಸುಬಾಗಿಸಿಕೊಂಡು ಅದರ ಆಧಾರದಲ್ಲೇ ಜೀವನ ನಡೆಸುತ್ತಿದ್ದ ರೈತರ ಬದುಕು ಬೀದಿಗೆ ಬಿದ್ದಿದೆ‌. ಲಕ್ಷಾಂತರ ರೂ.ಗಳನ್ನು ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಮುಂದಿನ ಜೀವನ ನಿರ್ವಹಣೆ ಬಹಳ ಕಷ್ಟಕರವಾಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಂಡ ನಂತರ ಪರಿಹಾರ ನೀಡುವ ಬದಲು, ಸಂಕಷ್ಟದಲ್ಲಿರುವ ರೈತನ ನೆರವಿಗೆ ಜಿಲ್ಲಾಡಳಿತ ಬರಬೇಕಿದೆ ಎಂದು ಒತ್ತಾಯಿಸಿದರು.

ಇದೇ ವೇಳೆ ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್, ಪಶುಪಾಲನ ಇಲಾಖೆ ಮತ್ತು ಪೊಲೀಸ್ ಇಲಾಖೆಯೊಂದಿಗೆ ಜಂಟಿ ಸಭೆ ಕರೆದು, ರೈತರಿಗೆ ನ್ಯಾಯ ದೊರಕಿಸಬೇಕೆಂದು ಒತ್ತಾಯಿಸಿದರು.

ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್ ಮಾತನಾಡಿ, ತಾಲೂಕಿನ ರಾಜಘಟ್ಟ, ಕೋಡಿಹಳ್ಳಿ, ಹಾಡೋನಹಳ್ಳಿ, ಸೊಣ್ಣಮಾರನಹಳ್ಳಿಯಲ್ಲಿ ಒಂದೇ ರೀತಿ 90ಕ್ಕು ಹೆಚ್ಚು ಕುರಿ-ಮೇಕೆಗಳು ಕಳವು ಮಾಡಿದ್ದು, ಪೊಲೀಸ್ ಠಾಣೆಗೆ ದೂರು ನೀಡಲಾಗುತ್ತಿದ್ದರು, ಕಳ್ಳರು ಪತ್ತೆಯಾಗಿಲ್ಲ. 

ಕೂಡಲೇ ಕಳ್ಳತನದ ತನಿಖೆಗೆ ಆದೇಶಿಸಿ, ತಾಲ್ಲೂಕಿನ ರೈತರ ಮತ್ತು ತಾಲೂಕಿನ ನಾಗರೀಕರ ಆತಂಕ ದೂರ ಮಾಡಬೇಕೆಂದರು.

ಈ ವೇಳೆ ಮನವಿ ಪತ್ರ ಸ್ವೀಕರಿಸಿದ ತಹಶೀಲ್ದಾರ್ ಈ ಕುರಿತಂತೆ ಜಿಲ್ಲಾಧಿಕಾರಿಯವರಿಗೆ ಗಮನಕ್ಕೆ ತಂದು, ರೈತರಿಗೆ ಪರಿಹಾರ ದೊರಕಿಸುವ ಭರವಸೆ ನೀಡಿದರು.

ಈ ವೇಳೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಪ್ರಧಾನ ಕಾರ್ಯದರ್ಶಿ ಎಸ್.ಎನ್ ವೇಣು. ಖಜಾಂಚಿ ಆನಂದ್, ಕಾರ್ಯದರ್ಶಿ ಜೋಗಹಳ್ಳಿ ಅಮ್ಮು, ಕಾನೂನು ಸಲಹೆಗಾರ ಆನಂದ್, ನಗರದ ಅಧ್ಯಕ್ಷ ಶ್ರೀನಗರ ಬಶೀರ್, ಕಾರ್ಯಕರ್ತರಾದ ಘಾಟಿ ತಿಮ್ಮರಾಜು, ರವಿ, ಸೂರಿ, ರಘುನಂದನ್, ನವೀನ್, ಅಯ್ಯಪ್ಪ ಸೇರಿದಂತೆ ಕುರಿ-ಮೇಕೆಗಳನ್ನು ಕಳೆದುಕೊಂಡ ನಾಲ್ಕು ಗ್ರಾಮಗಳ ರೈತರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!