67 ನೇ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು, (ಅ.31): 67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರತ್ನ ಪ್ರಶಸ್ತಿ ಹಾಗೂ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನದಲ್ಲಿ ಸುದ್ಧಿ ಗೋಷ್ಠಿ ನಡೆಸಿದರು.

ನಾಳೆ ನಾಡಿನಾದ್ಯಂತ ಗ್ರಾಮಗಳಲ್ಲಿ, ನಗರಗಳಲ್ಲಿ, ಶಾಲೆ ಹಾಗೂ ಇತರೆ ಸಂಘ ಸಂಸ್ಥೆಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿ ರಾಜ್ಯೋತ್ಸವದ ಆಚರಿಸಬೇಕು ಹಾಗೂ ಕನ್ನಡದ ಧ್ವಜಗಳನ್ನು ಹಾರಿಸಬೇಕು ಎಂದು ಕರೆ ನೀಡಿದರು. 

ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ನಾಳೆ ಸಂಜೆ 4.00 ಗಂಟೆಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ  ಹಮ್ಮಿಕೊಳ್ಳಲಾಗಿದೆ. ದಿವಂಗತ ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಸರ್ಕಾರ ಕೊಡಮಾಡುತ್ತಿದ್ದು, ಅಭಿಮಾನಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಗಳು ಕೋರಿದರು. 

ರಾಜ್ಯೋತ್ಸವ ಪ್ರಶಸ್ತಿ: ನಾಳೆ ಸಂಜೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗಳ ವಿತರಣೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಗಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಎಲ್ಲಾ ಶ್ರೇಷ್ಠ ವ್ಯಕ್ತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು.

ಬಂಡವಾಳ ಹೂಡಿಕೆದಾರರ ಸಮಾವೇಶ: ನವೆಂಬರ್ 2, 3 4 ರಂದು ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಜಗತ್ತಿನಾದ್ಯಂತ  ಪ್ರಮುಖ

ಉದ್ಯಮಿಗಳು, ಉದ್ದಿಮೆಯ ನಾಯಕರು ಈ ಸಮಾವೇಶದಲ್ಲಿ ಭಾಗವಹಿಸಿದ್ದು, ಜೊತೆಗೆ 5 ಲಕ್ಷ ಕೋಟಿ ರೂ.ಗಳಿಗೂ ಹೆಚ್ವಿನ ಬಂಡವಾಳ ಹೂಡಿಕೆಯಾಗುತ್ತದೆ. ಈಗಾಗಲೇ ಬಹಳಷ್ಟು ಜನ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದು, ಅವರ ಯೋಜನೆಗಳ ಅನುಮೋದನೆಯನ್ನೂ ಮಾಡಲಾಗಿದೆ. ಭರವಸೆ ಪತ್ರವನ್ನೂ ನಾಳೆ ವಿತರಿಸಲಿದ್ದು, ಮುಂದಿನ 3 ದಿನಗಳ ಕಾಲ ಹಲವಾರು ಕ್ಷೇತ್ರಗಳಲ್ಲಿ ಆಗುತ್ತಿರುವ ಪ್ರಗತಿ ಹಾಗೂ  ನವೀಕರಿಸಬಹುದಾದ ಇಂಧನ, ಸೆಮಿಕಂಡಕ್ಟರ್, ಏರೋಸ್ಪೇಸ್, ರಕ್ಷಣಾ ಕ್ಷೇತ್ರ ಮುಂತಾದ ಪ್ರಮುಖ   ಕ್ಷೇತ್ರಗಳ ಸವಾಲುಗಳು ಹಾಗೂ ಬೆಳವಣಿಗೆಯ ಬಗ್ಗೆ  ಚರ್ಚಾ ಗೋಷ್ಠಿಗಳು  ನಡೆಯಲಿವೆ. ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದ ಎಲ್ಲಾ ಪರಿಣಿತರು ಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. ಮೂರು ದಿನಗಳ ಈ ಕಾರ್ಯಕ್ರಮ  ರಾಜ್ಯದಲ್ಲಿ ಮುಂದಿನ 5 ವರ್ಷಗಳ ಕಾಲ ಆರ್ಥಿಕ ಚಟುವಟಿಕೆಗಳ ಕುರಿತ ದಿಕ್ಸೂಚಿಯಾಗಲಿದೆ. ಇದರಲ್ಲಿಯೂ ಆಸಕ್ತರು, ಉದ್ಯಮಿಗಳು ಹಾಗೂ ಸಣ್ಣ ಕೈಗಾರಿಕೋದ್ಯಮಿಗಳಿಗೆ ಅವಕಾಶವಿದೆ. ಹೆಸರುಗಳನ್ನು ನೋಂದಾಯಿಸಿಕೊಂಡು ಭಾಗವಹಿಸಬೇಕು. ನೋಂದಣಿ ಮೂಲಕ ಮಾತ್ರವೇ ಸಮಾವೇಶಕ್ಕೆ ಪ್ರವೇಶವಿದೆ ಎಂದರು. 

ನವೆಂಬರ್ 11 ರಂದು ಪ್ರಧಾನಿಗಳಿಂದ ಪ್ರಗತಿ  ಪ್ರತಿಮೆ ಉದ್ಘಾಟನೆ: 

ನವೆಂಬರ್ 11ರಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್,   ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ – ಚೆನ್ನೈ, ಬೆಂಗಳೂರು- ಮೈಸೂರಿಗೆ , ಹೈಸ್ಪೀಡ್ ರೈಲನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಕೂಡ ಪ್ರಧಾನಿಗಳೇ  ಉದ್ಘಾಟಿಸುತ್ತಿದ್ದು, ಬೆಂಗಳೂರು ನಿರ್ಮಾತೃ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಯ ಪ್ರತಿಮೆ ಉದ್ಘಾಟನೆಯಾಗುತ್ತಿದೆ. ಕೆಂಪೇಗೌಡರು ಪ್ರಗತಿಯ ಸಂಕೇತವಾಗಿದ್ದು, ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಲಕ್ಷಾಂತರ ಜನ ಇದರಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ವಿವರಿಸಿದರು. 

ತನಿಖೆ: ಇನ್ಸ್ಪೆಕ್ಟರ್ ನಂದೀಶ್ ಆತ್ಮಹತ್ಯೆ ಪ್ರಕರಣದ ತನಿಖೆ ಪ್ರಾರಂಭಿಸಲು ಡಿಜಿಪಿ ಅವರಿಗೆ ಸೂಚನೆ ನೀಡಲಾಗಿದೆ. ಸಂಪೂರ್ಣ, ವಿಸ್ತೃತ ತನಿಖೆ ಕೈಗೊಳ್ಳಲು ತಿಳಿಸಿದ್ದೇನೆ ಎಂದರು. 

ವ್ಯಾಖ್ಯಾನ ಮಾಡುವುದಿಲ್ಲ: ಸಿದ್ದರಾಮಯ್ಯ ಅವರು ಸಾಲ ಪಡೆದಿರುವ ಬಗ್ಗೆ ಪತ್ರಿಕೆ ಯಲ್ಲಿ ಓದಿ ನನ್ನ ಗಮನಕ್ಕೆ ಬಂದಿದೆ. ಯಾವುದೇ ಆದರೂ ವ್ಯವಸ್ಥಿತವಾಗಿ ತನಿಖೆಯಾಗಬೇಕು. ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ. ಕೊಟ್ಟರೆ ಆ ಪ್ರಕ್ರಿಯೆ ಯನ್ನು ಪ್ರಾರಂಭ ಮಾಡಲಾಗುತ್ತದೆ. ಈ ಸಂದರ್ಭದಲ್ಲಿ ನಾನು ವಿರೋಧ ಪಕ್ಷದ ರೀತಿಯಲ್ಲಿ ಯಾವುದೇ ವ್ಯಾಖ್ಯಾನ ಮಾಡುವುದಿಲ್ಲ. ಅವರಿಗೆ ಆಧಾರ ರಹಿತ ವಾಗಿ ವ್ಯಾಖ್ಯಾನ ಮಾಡುವ ರೂಢಿ ಇದೆ. ನಾನು ಹಾಗೆ ಮಾಡುವುದಿಲ್ಲ. ಸತ್ಯಹಿರಗೆ ಬರಲಿ ಎಂದರು. 

ಕಾದು ನೋಡಿ: ಸೋಲಾರ್ ಹಗರಣ ತನಿಖೆಯಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ ಕಾದು ನೋಡಿ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]