ಬೆಂ.ಗ್ರಾ.ಜಿಲ್ಲೆ, (ನ.01): “67ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ ಬಳಿ ಇರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು ಹಾಗೂ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ವಂದಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
