ದಿ.ಪುನೀತ್ ರಾಜ್‍ ಕುಮಾರ್ ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ: ಅಭಿಮಾನಿಗಳಿಗಾಗಿ ಮತ್ತೆ ಹುಟ್ಟಿ ಬನ್ನಿಯೆಂದ ಸಿಎಂ

ಬೆಂಗಳೂರು,(ನ.1): ವರ್ಷಧಾರೆಯನ್ನೂ ಲೆಕ್ಕಿಸದೆ ನೆರೆದಿದ್ದ ಅಸಂಖ್ಯ ಅಭಿಮಾನಿಗಳ ಸಮ್ಮುಖದಲ್ಲಿ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

13 ವರ್ಷಗಳ ನಂತರ ಪ್ರದಾನ ಮಾಡಲಾದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸ್ವೀಕರಿಸಿದರು.

ತಮಿಳಿನ ಸೂಪರ್ ಸ್ಟಾರ್ ರಜನೀಕಾಂತ್‍, ತೆಲುಗಿನ ಖ್ಯಾತ ನಟ ಜ್ಯೂನಿಯರ್ ಎನ್‍.ಟಿ.ಆರ್. ಅವರು ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

ಮಳೆಯ ಕಾರಣದಿಂದ ಮೊಟಕುಗೊಳಿಸಲಾದ ಕಾರ್ಯಕ್ರಮದಲ್ಲಿ ಭಾವತೀವ್ರತೆಯದ್ದೇ ರಾಜ್ಯಭಾರ. ಅಭಿಮಾನಿಗಳು, ಚಿತ್ರರಂಗದ ಗಣ್ಯರು ಹಾಗೂ ಡಾ.ರಾಜ್‍ ಕುಮಾರ್ ಕುಟುಂಬದವರು  ಸುರಿಯುವ ಮಳೆಯನ್ನೂ ಲೆಕ್ಕಿಸದೆ ಕಾರ್ಯಕ್ರಮವನ್ನು ಕಣ್ತುಂಬಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ರಜನೀಕಾಂತ್ ಅವರು ಪುನೀತ್ ಅವರನ್ನು ದೇವರ ಮಗು ಎಂದು ಬಣ್ಣಿಸಿದರು. ಜ್ಯೂನಿಯರ್ ಎನ್‍.ಟಿ.ಆರ್. ನಾನು ಇಲ್ಲಿ ನನ್ನ ಸಾಧನೆಯ ಕಾರಣಕ್ಕೆ ನಿಂತಿಲ್ಲ. ಒಬ್ಬ ಆತ್ಮೀಯ ಗೆಳೆಯನಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ ಎನ್ನುವ ಮೂಲಕ ತಮ್ಮ ನಡುವಿನ ಬಾಂಧವ್ಯವನ್ನು ಬಿಚ್ಚಿಟ್ಟರು. ಪರಭಾಷೆಯಲ್ಲಿ ಮಿಂಚಿದ ಇಬ್ಬರೂ ನಟರು ಅಚ್ಚಕನ್ನಡದಲ್ಲಿ ಮಾತನಾಡುವ ಮೂಲಕ ಅಭಿಮಾನಿಗಳ ಮನಸೂರೆಗೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕದ ರತ್ನನಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಪುನೀತ್ ರಾಜ್‍ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಧನ್ಯರಾಗಿದ್ದೇವೆ ಎಂದು ಭಾವುಕರಾಗಿ ನುಡಿದರು.

ಇಂದು ರಾಜ್ಯದೆಲ್ಲೆಡೆ ಪುನೀತ್ ರಾಜ್‍ ಕುಮಾರ್ ಅವರಿಗೆ ಅಭಿಮಾನದ ಸಾಗರವೇ ಹರಿದಿದೆ. ಪುನೀತ್ ಅವರು ನಮ್ಮ ನಡುವೆಯೇ ಇದ್ದಾರೆ. ನಮ್ಮೆಲ್ಲರ ಮನದಲ್ಲಿದ್ದಾರೆ ಎಂದ ಮುಖ್ಯಮಂತ್ರಿಗಳು ವರ್ಷಧಾರೆಯ ನಡುವೆಯೂ ವಿಚಲಿತರಾಗದೆ ಕಾರ್ಯಕ್ರಮ ವೀಕ್ಷಿಸಿದ ಅಭಿಮಾನಿಗಳನ್ನು ಕಂಡು, ಕನ್ನಡ ನೆಲದಲ್ಲಿ ನಿಮ್ಮ ಮೇಲಿರುವ ಪ್ರೀತಿ, ಅಭಿಮಾನಗಳಿಗಾಗಿಯಾದರೂ ಮತ್ತೆ ಹುಟ್ಟಿ ಬನ್ನಿ ಎಂದು ಹಾರೈಸಿದರು.

ನಟ ಸಾರ್ವಭೌಮ ಡಾ.ರಾಜ್‍ ಕುಮಾರ್ ಹಾಗೂ ಪಾರ್ವತಮ್ಮ ಅವರ ಆಶೀರ್ವಾದದಿಂದ ಜನಿಸಿದ ಅಪ್ಪು ಇಂದು ಎಲ್ಲರ ಮನದಲ್ಲಿ ನೆಲೆಸಿದ್ದಾರೆ ಎಂದರು.

ಇನ್‍ಫೋಸಿಸ್ ಫೌಂಡೇಷನ್ ಮುಖ್ಯಸ್ಥರಾದ ಶ್ರೀಮತಿ ಸುಧಾಮೂರ್ತಿ, ಖ್ಯಾತ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ ಕುಮಾರ್, ಡಾ.ರಾಜ್‍ ಕುಮಾರ್ ಕುಟುಂಬದ ಸದಸ್ಯರು, ಸಚಿವ ಸಂಪುಟದ ಸದಸ್ಯರು ಹಾಗೂ ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]