ದೊಡ್ಡಬಳ್ಳಾಪುರ: ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ, ಶಾಸಕ ಟಿ.ವೆಂಕಟರಮಣಯ್ಯ ಅವರ ಸಹೋದರ ಎಂಪಿಸಿಎಸ್ ಅಧ್ಯಕ್ಷ ರಾಮಣ್ಣ ಚಿನ್ನದ ನಾಣ್ಯ ನೀಡಿದರು.
ತಾಲೂಕಿನ ಹುಲಿಕುಂಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳಿಗೆ ಚಿನ್ನದ ನಾಣ್ಯ ನೀಡಿದ ರಾಮಣ್ಣ ಮಾತನಾಡಿ, ಬಡತನ ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಬಾರದೆಂದರು.
ನಮ್ಮ ಕುಟುಂಬದಲ್ಲಿನ ಆರ್ಥಿಕ ಅನಾನುಕೂಲದಿಂದ ಹೆಚ್ಚಿನ ವಿದ್ಯಾರ್ಜನೆ ಮಾಡಲು ಸಾಧ್ಯವಾಗಲಿಲ್ಲ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಸರ್ಕಾರಗಳು, ಸಂಘ ಸಂಸ್ಥೆಗಳು ಹಾಗೂ ಉದ್ದಿಮೆದಾರರು ಸರ್ಕಾರಿ ಶಾಲೆ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.
ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸೌಲಭ್ಯಗಳನ್ನು ಬಳಸಿಕೊಂಡು ಹೆಚ್ಚಿನ ಅಂಕಗಳನ್ನು ಪಡೆದು, ಉನ್ನತ ಹುದ್ದೆಗೇರಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಉದ್ಯಮಿ ಪ್ರಸನ್ನ, ಹುಲಿಕುಂಟೆ ಗ್ರಾಪಂ ಅಧ್ಯಕ್ಷೆ ಸವಿತಾ ಮಂಜುನಾಥ್ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಶಾಲೆಯ ಶಿಕ್ಷಕರು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

