ಕಳಪೆ ಗುಣಮಟ್ಟದ ಮನೆ ಕಟ್ಟಿಕೊಟ್ಟ ಬಿಲ್ಡರ್‌ಗೆ 4 ಲಕ್ಷ ದಂಡ ಸೇರಿ ಒಟ್ಟು 5.10 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ ಜಿಲ್ಲಾ ಗ್ರಾಹಕರ ಆಯೋಗ

ಧಾರವಾಡ (ನ.02): ಕಳಪೆ ಗುಣಮಟ್ಟದ ಮನೆ ಕಟ್ಟಿಕೊಟ್ಟ ಬಿಲ್ಡರ್‌ಗೆ 4 ಲಕ್ಷ ದಂಡ ಸೇರಿ ಒಟ್ಟು 5.10 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ ಜಿಲ್ಲಾ ಗ್ರಾಹಕರ ಆಯೋಗ ಆದೇಶಿಸಿದೆ.

ಹುಬ್ಬಳ್ಳಿಯ ದೇವಾಂಗ ಪೇಟೆಯಲ್ಲಿರುವ ತನ್ನ ಪ್ಲಾಟನಲ್ಲಿ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ಕಟ್ಟಿಕೊಡುವಂತೆ ನಿವೃತ್ತ ಪೋಲಿಸ್ ನೌಕರ ಶಂಕರ ಕೆರಕಣ್ಣವರ ಹುಬ್ಬಳ್ಳಿಯ ಪ್ರಶಾಂತ ಲೋಕಾಪೂರ ಹಾಗೂ ಗಾಯಿತ್ರಿ ಲೋಕಾಪೂರ ಬಿಲ್ಡರ್ವರ ಜೊತೆ ಒಪ್ಪಂದ ಮಾಡಿಕೊಂಡಿದ್ದರು.

ಅದರ ಪ್ರಕಾರ ದೂರುದಾರ 25 ಲಕ್ಷ ರೂಪಾಯಿ ಸಂದಾಯ ಮಾಡಿದ್ದರು. ಬಿಲ್ಡರ್‌ಗಳು ಕಡಿಮೆ ಗುಣಮಟ್ಟದ ಕಳಪೆ ಸಾಮಗ್ರಿಗಳನ್ನು ಮನೆ ಕಟ್ಟಲು ಉಪಯೋಗಿಸಿ ಮನೆ ಕಟ್ಟಿದ್ದರಿಂದ ಈಗ ಮನೆಯಲ್ಲಿ ಲಿಕೇಜ್ ಬಂದು ಮನೆಯ ಪರಿಕರಗಳು ಕೆಟ್ಟು ಹೋಗಿ ತಮ್ಮ ದೈನಂದಿನ ಜೀವನಕ್ಕೆ ತೊಂದರೆಯಾಗಿದೆ ಮತ್ತು ಕಳಪೆ ಗುಣಮಟ್ಟದ ಮನೆ ನಿರ್ಮಾಣದಿಂದ ತನಗೆ ಆರ್ಥಿಕ ಹಾನಿ, ಮಾನಸಿಕ ತೊಂದರೆಯಾಗಿದೆ.

ಕಾರಣ ಬಿಲ್ಡರ್‍ಗಳು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ ಅವರಿಂದ 5 ಲಕ್ಷ ರೂಪಾಯಿ ಪರಿಹಾರ, 2 ಲಕ್ಷ ರೂಪಾಯಿ ಮಾನಸಿಕ ತೊಂದರೆಗೆ ಪರಿಹಾರ ಬಡ್ಡಿ ಸಮೇತ ಕೊಡಿಸುವಂತೆ ದೂರುದಾರ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಬಿಲ್ಡರ್‍ಗಳು ವಕೀಲರ ಮೂಲಕ ಹಾಜರಾಗಿ ತಾವೇ ಸುಮಾರು 2.5 ಲಕ್ಷ ಮೊತ್ತದ ಹೆಚ್ಚುವರಿ ಕೆಲಸ ಮಾಡಿಕೊಟ್ಟಿದ್ದು, ತಮ್ಮಿಂದ ಯಾವುದೇ ಸೇವಾ ನ್ಯೂನ್ಯತೆ ಆಗಿಲ್ಲಾ ಅಂತಾ ಹೇಳಿ ಈ ದೂರನ್ನು ವಜಾ ಮಾಡುವಂತೆ ಕೋರಿದ್ದರು.

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರಾದ ವ್ಹಿ.ಎ. ಬೋಳಶೆಟ್ಟಿ ಮತ್ತು ಪಿ.ಸಿ.ಹಿರೇಮಠ ಅವರು, ಕಟ್ಟಡದ ನಿರ್ಮಾಣ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಉಪಯೋಗಿಸಲಾಗಿದೆಯೋ ಅಥವಾ ಇಲ್ಲವೋ ಅನ್ನುವುದನ್ನು ತಿಳಿದುಕೊಳ್ಳಲು ಧಾರವಾಡದ ಅರವಿಂದ ಕಪಲಿ ಅನ್ನುವ ಸ್ವತಂತ್ರ ಸಿವಿಲ್ ಇಂಜನೀಯರರವನ್ನು ನೇಮಿಸಿ ಅವರಿಂದ ಕಟ್ಟಡ ಕಾಮಗಾರಿಯ ಬಗ್ಗೆ ಗ್ರಾಹಕರ ಆಯೊಗ ವಿವರವಾದ ವರದಿ ತರಿಸಿಕೊಂಡಿತ್ತು.

ಅವರ ವರದಿಯನ್ನು ಆಧರಿಸಿ ಬಿಲ್ಡರ್‌ಗಳ ಕೋರಿಕೆಯನ್ನು ತಳ್ಳಿಹಾಕಿ ಉಭಯತರ ಮಧ್ಯೆ ಆಗಿರುವ ಕಟ್ಟಡ ನಿರ್ಮಾಣದ ಒಪ್ಪಂದ ಪತ್ರದಲ್ಲಿರುವ ಷರತ್ತಿಗೆ ವಿರುದ್ಧವಾಗಿ ಕಳಪೆ ಗುಣಮಟ್ಟದ ಸಾಮಗ್ರಿಗಳನ್ನು ಉಪಯೋಗಿಸಿ ಮನೆ ನಿರ್ಮಿಸಿಕೊಟ್ಟು ದೂರುದಾರನಿಗೆ ಮತ್ತು ಅವರ ಕುಟುಂಬದವರಿಗೆ ತೊಂದರೆ ಉಂಟು ಮಾಡಿ ಬಿಲ್ಡರ್‍ಗಳು ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ತೀರ್ಪು ನೀಡಿದ್ದಾರೆ.

ಈ ತಪ್ಪಿಗೆ ಬಿಲ್ಡರ್ ಗಳು ದೂರುದಾರನ ಮನೆಯ ದುರಸ್ತಿ ಮತ್ತು ಇತರೇ ಖರ್ಚಿಗೆ 4 ಲಕ್ಷ ರೂಪಾಯಿ ದಂಡದ ರೂಪದಲ್ಲಿ ಪರಿಹಾರ ಕೊಡುವಂತೆ ಮತ್ತು ಕಳಪೆ ಮನೆ ನಿರ್ಮಾಣದಿಂದ ದೂರುದಾರ ಮತ್ತು ಅವರ ಕುಟುಂಬದವರಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ಹಿಂಸೆಗಾಗಿ 1 ಲಕ್ಷ ರೂಪಾಯಿ ಪರಿಹಾರ ಹಾಗೂ 10 ಸಾವಿರ ರೂಪಾಯಿ ಈ ಪ್ರಕರಣದ ಖರ್ಚು ವೆಚ್ಚ ಕೊಡಲು ಆದೇಶಿಸಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!