ಭಾರತೀಯ ಅರ್ಥವ್ಯವಸ್ಥೆ ಸಶಕ್ತ: ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು, (ನ.02 ): ಕೋವಿಡ್ ಮಹಾಮಾರಿಯನ್ನು ಎದುರಿಸಿ ಭಾರತೀಯ ಅರ್ಥ ವ್ಯವಸ್ಥೆ ಸಶಕ್ತವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಕಟಿಸಿದರು.

ಇಂದಿನಿಂದ ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ಐದನೇ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ವಾಸ್ತವ ವೇದಿಕೆಯ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಎಂಟು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಕಾರ್ಯಾಚರಿಸುತ್ತಿದ್ದ ವಿಮಾನ ನಿಲ್ದಾಣಗಳ ಸಂಖ್ಯೆ 70 ರಿಂದ 140 ಕ್ಕೆ ದುಪ್ಪಟ್ಟು ಆಗಿದೆ. ಅಂತೆಯೇ, ಕೇವಲ ಐದು ನಗರಗಳಲ್ಲಿ ಮೆಟ್ರೋ ರೈಲು ಸೇವೆ ಇದ್ದು, ಇದೀಗ ಭಾರತದ 20 ನಗರಗಳಲ್ಲಿ ಮೆಟ್ರೋ ರೈಲು ಸೇವೆ ಲಭ್ಯವಿದೆ. ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿನ ವಿಫುಲ ಅವಕಾಶಗಳು ಹಾಗೂ ಪಾರದರ್ಶಕತೆ ಇದೆಲ್ಲವನ್ನೂ ಸಾಧ್ಯ ಮಾಡಿದೆ.  ರಕ್ಷಣಾ ಕ್ಷೇತ್ರದಿಂದ ಬಾಹ್ಯಾಕಾಶ ಕ್ಷೇತ್ರದವರೆಗೆ ವಿದೇಶಿ ನೇರ ಬಂಡವಾಳಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂಕಿತ ಕ್ಷೇತ್ರದಲ್ಲಿ (ಡಿಜಿಟಲ್ ಸೆಕ್ಟರ್) ಮಹಾಕ್ರಾಂತಿಯೇ ಆಗಿದೆ ಎಂದು ಅವರು ವಿವರಿಸಿದರು.

ಪ್ರಧಾನ ಮಂತ್ರಿ ಗತಿಶಕ್ತಿ ರಾಷ್ಟ್ರೀಯ ಪ್ರಧಾನ ಯೋಜನೆ (ಮಾಸ್ಟರ್ ಪ್ಲಾನ್) ಅಡಿ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳ ಹೊಂದಾಣಿಕೆ ಒಳಗೊಂಡಂತೆ ಕೊನೆಯ ಮೈಲಿ ಸಂಪರ್ಕದ ವಿವಿಧ ಯೋಜನೆಗಳಿಗೆ ಚಲನೆ ನೀಡಲಾಗಿದೆ.

ಕಳೆದ ಎಂಟು ವರ್ಷಗಳಲ್ಲಿ ದಾಖಲೆಯ ಪ್ರಮಾಣದಲ್ಲಿ ರಫ್ತು ಆಗಿದೆ. ತಾಂತ್ರಿಕ ಮತ್ತು ನಿರ್ವಹಣಾ ವಿಷಯಾಧಾರಿತ ವಿಶ್ವವಿದ್ಯಾಲಯಗಳ ಪ್ರಮಾಣ ಶೇಕಡಾ ಐವತ್ತರಷ್ಟು ಹೆಚ್ಚಿದೆ. ಆರೋಗ್ಯ ವಿಮಾ ಕ್ಷೇತ್ರದಲ್ಲಿಯೂ ಇಡೀ ವಿಶ್ವದಲ್ಲಿಯೇ ದಾಖಲೆಯ ಸಾಧನೆ ಭಾರತದಲ್ಲಾಗಿದೆ.   ಆರೋಗ್ಯ ಮತ್ತು ಸೌಖ್ಯ ಚಿಕಿತ್ಸಾಲಯಗಳ ಸಂಖ್ಯೆ ಒಂದೂವರೆ ಲಕ್ಷದಷ್ಟು ದಾಟಿದೆ. ಈ ಎಲ್ಲದರ ಹಿನ್ನಲೆಯಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಕೂಡಾ ಭಾರತದಲ್ಲಿ ಆರ್ಥಿಕ ಹಿಂಜರಿತ ಅಥವಾ ಆರ್ಥಿಕ ಕುಸಿತ ಉಂಟಾಗಲಿಲ್ಲ. ಅಂತೆಯೇ, ಭಾರತದ ಆರ್ಥಿಕತೆ ಸಶಕ್ತವಾಗಿ ಮತ್ತು ಸದೃಢವಾಗಿ ನಿಂತಿದೆ ಎಂದು ಅವರು ಹೇಳಿದರು.

ನವಭಾರತದ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದಿಟ್ಟ ಸುಧಾರಣೆಗಳೇ ಕಾರಣ ಎಂದು ಬಣ್ಣಿಸಿದ ಅವರು ನವೀಕೃತ ಇಂಧನ ಕ್ಷೇತ್ರದಲ್ಲಿ ಮುಪ್ಪಟ್ಟು ಹಾಗೂ ಸೌರಶಕ್ತಿ ಕ್ಷೇತ್ರದಲ್ಲಿ ದುಪ್ಪಟ್ಟು ಪ್ರಮಾಣದಲ್ಲಿ ಸಾಧನೆಯಾಗಿದೆ ಎಂದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಂದೇ ಪಕ್ಷ ಇರುವುದರಿಂದ  ನಿರ್ದಿಷ್ಟ ಕ್ಷೇತ್ರಗಳಲ್ಲಿ ರಾಷ್ಟ್ರ ವಿಕಾಸದತ್ತ ಮುಂದಡಿ ಇಡಲು ಸಾಧ್ಯವಾಗಿದೆ ಎಂದ ನರೇಂದ್ರ ಮೋದಿ ಅವರು ಕರ್ನಾಟಕವು ಪ್ರಕೃತಿ ಹಾಗೂ ಸಂಸ್ಕೃತಿಯ ಅದ್ಭುತ ಸಂಗಮ ಎಂದು ಬಣ್ಣಿಸಿ, ಬ್ರ್ಯಾಂಡ್ ಬೆಂಗಳೂರು ಎಂದು ಬಣ್ಣಿಸಿ, ವಿಶ್ವದ ನಕ್ಷೆಯಲ್ಲಿ ಅಭಿವೃದ್ಧಿ ಕಕ್ಷೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಗಮನಾರ್ಹ ಎಂದರಲ್ಲದೇ, ಎಲ್ಲರ ಹೃದಯಗಳನ್ನು ಗೆಲ್ಲುವಂತಹ ಕನ್ನಡಿಗರ ಔದಾರ್ಯವನ್ನು ಸ್ಮರಿಸಿ ದೇಶ ವಿದೇಶಗಳಿಂದ ಆಗಮಿಸಿದ ಹೂಡಿಕೆದಾರರನ್ನು ಕೈಬೀಸಿ ಕರೆಯುತ್ತಿರುವ ಇನ್ವೆಸ್ಟ್ ಕರ್ನಾಟಕದಲ್ಲಿ ಸಾವಿರಾರು ಕೋಟಿ ಹೂಡಿಕೆ ಮಾಡಿ ವಿಫುಲ ಉದ್ಯೋಗಾವಕಾಶಗಳನ್ನು ದೊರಕಿಸಿಕೊಡಲು ಸಹಕರಿಸಿ ಎಂದು ಹೂಡಿಕೆದಾರರಲ್ಲಿ ಮನವಿ ಮಾಡಿದರು.

ಇದು ಕೇವಲ ಕರ್ನಾಟಕ ಮಾತ್ರವಲ್ಲದೇ ಭಾರತ ಹಾಗೂ ಇಡೀ ವಿಶ್ವವನ್ನೇ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಸಹಕಾರಿಯಾಗಲಿದೆ ಎಂದು ಪ್ರಧಾನ ಮಂತ್ರಿ ಅಭಿಪ್ರಾಯ ಪಟ್ಟರು.     

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!