ಮಳೆ: ಜೆಡಿಎಸ್ ಪಂಚರತ್ನ ರಥಯಾತ್ರೆ ಒಂದು ವಾರ ಮುಂದಕ್ಕೆ

ಮುಳಬಾಗಿಲು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕೋಲಾರ ಜಿಲ್ಲೆಯಲ್ಲಿ ಭಾರೀ ಮಳೆ ಆಗುತ್ತಿದ್ದು, ಮಂಗಳವಾರದಿಂದ ಆರಂಭವಾದ ಜೆಡಿಎಸ್ ಪಂಚರತ್ನ ಯಾತ್ರೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಲಾಗಿದೆ.

ಈ ವಿಷಯ ತಿಳಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಳೆ ಬಿಡುವು ಕೊಟ್ಟ ಕೂಡಲೇ ರಥಯಾತ್ರೆಯನ್ನು ಕೂಡಲೇ ಆರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಂಗಳವಾರ ಬೆಳಗ್ಗೆಯೇ ಇತಿಹಾಸ ಪ್ರಸಿದ್ಧ ಕುರುಡುಮಲೆ ಮಹಾಗಣಪತಿ ದೇವಾಲಯದಲ್ಲಿ ಪೂಜೆ, ಹೋಮ ನೆರವೇರಿಸಿದ ನಂತರ ರಥಯಾತ್ರೆಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ನಾನು ಚಾಲನೆ ನೀಡಿದೆವು. ಆದರೆ, ಮಳೆ ಹೆಚ್ಚಾದ ಕಾರಣಕ್ಕೆ ಬೃಹತ್ ಸಮಾವೇಶ ರಥಯಾತ್ರೆ ಹಾಗೂ ಗ್ರಾಮ ವಾಸ್ತವ್ಯವನ್ನು ಒಂದು ವಾರ ಮುಂದಕ್ಕೆ ಹಾಕಲಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಿಷ್ಟು; ಮಂಗಳವಾರದ ಕಾರ್ಯಕ್ರಮಕ್ಕೆ ವರುಣನ ಸಿಂಚನ ಆಗಿದೆ. ರಭಸವಾಗಿ ಸುರಿದ ಕಾರಣ ಬಹಿರಂಗ ಸಭೆ, ರಥಯಾತ್ರೆ, ಗ್ರಾಮ ವಾಸ್ತವ್ಯವನ್ನು ಮುಂದೂಡಲಾಗಿದೆ.

ಬೆಳಗ್ಗೆಯಿಂದ ಕುರುಡುಮಲೆ ದೇವಸ್ಥಾನದಲ್ಲಿ ಪೂಜೆ ಆಯಿತು. ದೇವರ ಪ್ರಸಾದ ಕೂಡ ಆಯಿತು. ಆದರೆ ಮಳೆ ಕಾರಣಕ್ಕೆ ಎಲ್ಲರ ಸಲಹೆ ಪಡೆದು ರಥಯಾತ್ರೆ  ಮುಂದೂಡಿದ್ದೇವೆ. ಒಂದು ವಾರದ ನಂತರ ಮುಳಬಾಗಿಲು ಪಟ್ಟಣದಿಂದಲೇ ಯಾತ್ರೆ ಶುರು ಮಾಡುತ್ತೇವೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇನ್ನೂ ನಾಲ್ಕೈದು ದಿನಗಳು ಮಳೆ ಬರಲಿದೆ ಎಂದಿದೆ. ಹೀಗಾಗಿ ಜನರಿಗೆ ತೊಂದರೆ ಆಗದಂತೆ ಮುಂದಕ್ಕೆ ಹಾಕಿದ್ದೇವೆ.

ಮಂಗಳವಾರ ಬಹಳ ದೊಡ್ಡ ಮಟ್ಟದಲ್ಲಿ ಜನತೆ ಬೆಂಬಲ ನೀಡಿದ್ದರು. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬಂದಿದ್ದರು. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಸುವುದು ಕಷ್ಟವಾಗಿದೆ. 

ಮಳೆಯ ಸೂಚನೆ ನೋಡಿಕೊಂಡು ಕಾರ್ಯಕ್ರಮ ಮಾಡಲಾಗುವುದು. ಎರಡು ದಿನಗಳಲ್ಲಿ ದಿನಾಂಕವನ್ನು ತಿಳಿಸಲಾಗುವುದು.

ಬೃಹತ್ ಸಮಾವೇಶದಲ್ಲಿ ಮುಂದಿನ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿ, ಅವರಿಗೆ ಪಕ್ಷ ನಿಷ್ಠೆಯ ಪ್ರಮಾಣ ವಚನ ಬೋಧಿಸುವ ಕಾರ್ಯಕ್ರಮ ಇತ್ತು. ಆದರೆ, ವಾರದ ನಂತರದ ಸಮಾವೇಶದಲ್ಲಿ ಪಟ್ಟಿ ಘೋಷಣೆ,  ಪ್ರಮಾಣ ವಚನ ಬೋಧನೆ ಎರಡನ್ನೂ ಮಾಡಲಾಗುವುದು.

ಈಗಾಗಲೇ ಅಭ್ಯರ್ಥಿಗಳಿಗೆ ಸೂಚನೆ ಕೊಡಲಾಗಿದ್ದು, ಅವರೆಲ್ಲರೂ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಕಳೆದ ವರ್ಷವೇ ಅವರಿಗೆ ಸೂಚನೆ ನೀಡಲಾಗಿದೆ ಸಂಭವನೀಯ ಎಲ್ಲಾ ಅಭ್ಯರ್ಥಿಗಳನ್ನು ಮುಳಬಾಗಿಲಿಗೆ ಕರೆಯಲಾಗಿತ್ತು.

ಕೆಸಿಆರ್ ಅವರ ಪ್ರತಿನಿಧಿ ಹಾಜರು: ರಥಯಾತ್ರೆ ಚಾಲನೆ ಹಾಗೂ ಬೃಹತ್ ಸಮಾವೇಶಕ್ಕೇ ತೆಲಂಗಾಣ ಮುಖ್ಯಮಂತ್ರಿ ಹಾಗೂ ಭಾರತ್ ರಾಷ್ಟ್ರ ಸಮಿತಿ ನಾಯಕ ಕೆ.ಚಂದ್ರಶೇಖರ ರಾವ್ ಅವರು ಶಾಸಕ ರಾಜೇಂದರ್ ರೆಡ್ಡಿ ಅವರನ್ನು ಕಳಿಸಿದ್ದಾರೆ. ಅವರ ಆಗಮನ ನಮಗೆ ಬಹಳ ಸಂತೋಷ ಉಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ: ರಾಜ್ಯ ಮತ್ತು ರಾಷ್ಟ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ಹೇಳುವುದು ಒಂದು ಮಾಡುವುದು ಇನ್ನೊಂದು ಎನ್ನುವಂತೆ ಆಗಿದೆ. ಬಿಜೆಪಿ ನಡವಳಿಕೆಯನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಎಲ್ಲಾ ರಾಜ್ಯಗಳಲ್ಲಿ ಶಾಸಕರನ್ನು ಖರೀದಿ ಮಾಡಿ ಸರಕಾರ ಮಾಡುತ್ತಿದ್ದಾರೆ. ಇದಕ್ಕೆ ಉತ್ತರ ಕೊಡುವ ಕಾಲ ಹತ್ತಿರದಲ್ಲೇ ಇದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುಳಬಾಗಿಲು ಕ್ಷೇತ್ರದ ಸಮೃದ್ಧಿ ಮಂಜುನಾಥ್, ಹಿರಿಯ ಮುಖಂಡರಾದ ಬಂಡೆಪ್ಪ, ತಿ.ಕಾಶೇಂಪೂರ್, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ.ಶರವಣ, ಗೋವಿಂದರಾಜು ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!