ನ.7 ರಿಂದ ಡಿ.7 ರವರೆಗೆ 3ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 1 ಲಕ್ಷ 62 ಸಾವಿರ ಜಾನುವಾರುಗಳಿಗೆ ಲಸಿಕೆಯ ಗುರಿ

ಬೆಂ.ಗ್ರಾ(ನ.04): ಜಿಲ್ಲೆಯಲ್ಲಿರುವ ಸುಮಾರು 1,62,980 ಎಲ್ಲಾ ಜಾನುವಾರುಗಳಿಗೆ  ನವೆಂಬರ್ 07 ರಿಂದ ಡಿಸೆಂಬರ್ 07 ರವರೆಗೆ 3ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ.

ಒಟ್ಟು 51 ತಂಡಗಳಲ್ಲಿ 189 ಲಸಿಕೆದಾರರು ಪ್ರತಿದಿನ ಬೆಳಿಗ್ಗೆ 6.30 ಯಿಂದ ಬೆಳಿಗ್ಗೆ 11.00 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಈ ರವಿಕುಮಾರ ಹೇಳಿದರು.

ಜಿಲ್ಲೆಯಲ್ಲಿ 3ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಜರುಗಿದ  ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಪ್ರತಿ ಗ್ರಾಮವಾರು ಮೈಕ್ರೋಪ್ಲಾನ್ ಮಾಡಲಾಗಿದ್ದು, ಅದರನ್ವಯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು, ಈ  ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡುವ ಸಲುವಾಗಿ ಭಿತ್ತಿಪತ್ರ ಮತ್ತು ಕರಪತ್ರಗಳನ್ನು ಮುದ್ರಿಸಿ, ಜಿಲ್ಲೆಯ ಪ್ರತಿ ಪಶುವೈದ್ಯಕೀಯ ಸಂಸ್ಥೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಆವರಣದಲ್ಲಿ ಪ್ರದರ್ಶಿಸುವ ಜೊತೆಗೆ,ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಪ್ರಚಾರ ನೀಡಬೇಕು.

ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,68,150 ಡೋಸ್ ಕಾಲುಬಾಯಿ ರೋಗ ಲಸಿಕೆ ಹಾಗೂ 1,46,000 ಸಿರಿಂಜ್‌ಗಳು ಸರಬರಾಜಾಗಿವೆ. ಬಮೂಲ್ ವತಿಯಿಂದ ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು 36 ವಾಹನಗಳು ಹಾಗೂ 40 ಲಸಿಕೆದಾರರನ್ನು ಒದಗಿಸಲಾಗುತ್ತಿದೆ. ಪ್ರತಿ ರಾಸಿಗೆ 1 ರಂತೆ ಸಿರಿಂಜ್ ಮತ್ತು ನೀಡಲ್‌ಗಳನ್ನು ಬಳಸಿ ಲಸಿಕೆ ಹಾಕಲಾಗುವುದು. ಜಿಲ್ಲೆಯ  ರೈತ ಬಾಂಧವರು ತಮ್ಮ 03 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.

ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಡಾ.ಜಿ.ಎಂ. ನಾಗರಾಜ, ಆಡಳಿತ ಶಾಖೆಯ ಮುಖ್ಯಪಶುವೈದ್ಯಾಧಿಕಾರಿಗಳು  ಡಾ. ನಾರಾಯಣಸ್ವಾಮಿ, ಡಾ.ಮಂಜುನಾಥ್ ಎಂ.ಕೆ, ಡಾ. ಸಿದ್ದಪ್ಪ ಹೆಚ್, ಡಾ.ವಿಶ್ವನಾಥ್ ಎಸ್, ಡಾ. ಅನಿಲ್ ಕುಮಾರ್, ಬಮೂಲ್‌ನ ಉಪವ್ಯವಸ್ಥಾಪಕರಾದ ಡಾ. ಗೋಪಾಲ್‌ಗೌಡ, ನಾಗರಾಜು, ರಾಜೇಶ್, ಸಂತೋಷ್ ಸೇರಿದಂತೆ ಜಿಲ್ಲೆತ  ನಗರಸಭೆ ಹಾಗೂ ಪುರಸಭೆಗಳ  ಮುಖ್ಯಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!