ಕರ್ನಾಟಕಕ್ಕೆ ಡಾ: ಸಿ.ಸೋಮಶೇಖರ್ ಅವರ ಕೊಡುಗೆ ಅಪಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, (ನ,05):  ಕರ್ನಾಟಕಕ್ಕೆ ಡಾ: ಸಿ.ಸೋಮಶೇಖರ್ ಅವರು ದೊಡ್ಡ ಕೊಡುಗೆ ನೀಡಿದ್ದಾರೆ. ಅವರು ಸದಾಕಾಲ ಕ್ರೀಯಾಶೀಲರಾಗಿ ಕೊಡುಗೆ ನೀಡುತ್ತಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಶುಕ್ರವಾರ ರಾತ್ರಿ ನಿವೃತ್ತ ಐಎಎಸ್‌ ಅಧಿಕಾರಿ ಡಾ: ಸಿ.ಸೋಮಶೇಖರ್ ಅವರ ಆತ್ಮಕಥನ ನೀನೊಲಿದ ಬದುಕು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.

ಅಧಿಕಾರಿಯಾಗಿ ಸಾಕಷ್ಟು ಜನರಿಗೆ  ಸಹಾಯ ಮಾಡಿದ್ದಾರೆ. ಅಧಿಕಾರ ಇಲ್ಲದಾಗಲೂ ಅಷ್ಟೇ ನಿರಂತರವಾಗಿ ಮಾಡುತ್ತಿದ್ದಾರೆ. ಅವರು ಗಡಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಗಡಿ,  ಭಾಷೆ,ಆಧ್ಯಾತ್ಮ,  ವಚನ ಸಾಹಿತ್ಯದ ಬಗ್ಗೆ ಅಪಾರ ಜ್ಞಾನ, ಅನುಭವ ಇದೆ ಎಂದರು. 

ಬದುಕನ್ನು ಒಲಿಸಿಕೊಂಡ ಧೀಮಂತ: ಅವರು ಬರೆದಿರುವ ಆದರೆ, ಮುದ್ರಿಸದೇ ಇರುವ ಬರಹ ಬಹಳಷ್ಟಿದೆ. ಸೋಮಶೇಖರ್ ಅವರದ್ದು ವರ್ಣ ರಂಜಿತ ಬದುಕು. ಎಲ್ಲಾ ರಂಗದಲಿಯೂ ಬಹಳ ಆಸಕ್ತಿವುಳ್ಳವರು. 

ಒಲವನ್ನು ಬದುಕಿನಲ್ಲಿ ಗಳಿಸಿಕೊಳ್ಳಬೇಕಾಗುತ್ತದೆ.  ತಾಯಿ ಮಗುವಿನ ಪ್ರೀತಿಯಿಂದ ಹಿಡಿದು ಎಲ್ಲಾ ಸಂಬಂಧ ಗಳಲ್ಲಿ ಒಲವು ಪಡೆದುಕೊಳ್ಳುವುದು ಕಷ್ಟದ ಕೆಲಸ. ನಾನು ಅನ್ನುವುದು ಬಿಟ್ಟಾಗ ಒಲವು ಸಿಗುತ್ತದೆ. ಸೋಮಶೇಖರ್ ಅವರ ಬದುಕಿನಲ್ಲಿ ನಾನು ಎನ್ನುವುದು ಅತ್ಯಂತ ವಿರಳವಾಗಿ ಬಂದಿದೆ.  ಯಾವುದೇ  ಸ್ಥಾನಮಾನ ಸಿಕ್ಕರೂ ಜನರ ಸೇವೆ ಮಾಡಿದ್ದಾರೆ. ಅವರು ಆಧ್ಯಾತ್ಮವನ್ನು ಬಲ್ಲವರು, ಸಂಪೂರ್ಣವಾಗಿಬದುಕನ್ನು ಒಲಿಸಿಕೊಂಡು, ಗಳಿಸಿಕೊಂಡು  ಸಾಕ್ಷಾತ್ಕಾರ ಮಾಡಿಕೊಂಡಿದ್ದಾರೆ‌ ಎಂದರು. 

ತಾಳ್ಮೆ ಇರಬೇಕು: ತಾಳ್ಮೆ ಇದ್ದವರಿಗೆ ಬದುಕು ಒಲಿಸಿಕೊಳ್ಳಲು ಸಾಧ್ಯವಾಗುತ್ತದೆ. ಎಂದೂ ಕೂಡ ಮನುಷ್ಯ ನಿರಾಶರಾಗಬಾರದು. ಅವರು ಅಧಿಕಾರದಲ್ಲಿದ್ದಾಗ ಎಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಿದ್ದರೋ ಅಷ್ಟೇ ಕ್ರಿಯಾಶೀಲರಾಗಿ ಅಧಿಕಾರ ಇಲ್ಲದಾಗಲೂ ಲವಲವಿಕೆಯಿಂದ ಕೆಲಸ ಮಾಡುತ್ತಿದ್ದಾರೆ‌. ಜನಸಮೂಹವನ್ನು ಗೆದ್ದಾಗ ಇದು ಬರುತ್ತದೆ ಎಂದರು.  

ಬಸವ ಪ್ರಶಸ್ತಿ ಪ್ರಾರಂಭಿಸಿದವರು: ಬಸವ ಪ್ರಶಸ್ತಿ ಪ್ರಾರಂಭಿಸಿ, ಅಧಿಕಾರಿಗಳಿಗೆ, ಸಾಹಿತ್ಯ ವರ್ಗಕ್ಕೆ, ಬೇಕಾದವರಾಗಿದ್ದಾರೆ. ಸಮಾಜಕ್ಕೆ ನಗುವನ್ನು ಹರಡುವ ಸ್ವಭಾವದವರು. 

ಅವರು ಜೀವನದಲ್ಲಿ ನೋವು ಅನುಭವಿಸಿದ್ದಾರೆ‌ ಅದನ್ನು ಮನದಾಳದಲ್ಲಿ ಇಟ್ಟುಕೊಂಡು ನಮಗೆಲ್ಲಾ ಸಂತೋಷ ನೀಡಿದ್ದಾರೆ‌. ಅವರ ಆಸೆಗಳನ್ನು ಈಡೇರಿಸುವ ದಿನಗಳು ದೂರ ಇಲ್ಲ. ಬಹಳಷ್ಟು ಆತ್ಮಕಥನಗಳಲ್ಲಿ ಹೇಳಿದ್ದಕ್ಕಿಂತ ಮುಚ್ಚಿಡುವುದೇ ಹೆಚ್ಚಿರುತ್ತದೆ.

ಕನ್ನಡ ನಾಡಿಗೆ ಭಿನ್ನವಾದ, ಅಪರೂಪದ ಸಾಹಿತಿ, ಅಧಿಕಾರಿಯಾಗಿದ್ದಾರೆ. ಸೋಮಶೇಖರ್ ತಮ್ಮ ಬದುಕಿನ ಮೌಲ್ಯ ನಿರಂತರ ಹರಡಿ.‌ ಇದೇ ಬದುಕಿನ ಬುತ್ತಿ ಎಂದರು. ಗಡಿ ಅಭಿವೃದ್ಧಿಯನ್ನು  ಬಹಳಷ್ಟು ಗಟ್ಟಿಯಾಗಿ ಮಾಡಲಿ ಎಂದರು. 

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ಸುನಿಲ್‌ ಕುಮಾರ್, ವಿ. ಸೋಮಣ್ಣ, ನಿ. ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]