ಬೆಂ.ಗ್ರಾ.ಜಿಲ್ಲೆ: (ನ.05): ಇದೇ ತಿಂಗಳು 11 ರಂದು ದಾಸಶ್ರೇಷ್ಠ ಕನಕದಾಸರು ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಗಳನ್ನು ದೇವನಹಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ ಹೇಳಿದರು.
ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಕನಕ ಜಯಂತಿ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಾಸಪಂಥದ ಮೇರುಸಾಧಕ ಕನಕದಾಸರು ಹಾಗೂ ವೀರವನಿತೆ ಒನಕೆ ಓಬವ್ವ ಅವರು ಕನ್ನಡ ನಾಡು,ನುಡಿಯ ಸಾಂಸ್ಕೃತಿಕ ಹಿರಿಮೆಯಾಗಿದ್ದಾರೆ.ಇದೇ ನವೆಂಬರ್ 11 ರಂದು ಈ ಇಬ್ಬರೂ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ದೇವನಹಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು.ಅದೇ ಪ್ರಧಾನಮಂತ್ರಿಗಳು ಬೆಂಗಳೂರು ನಗರ ಹಾಗೂ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಆವರಣಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಸಂಚಾರ ದಟ್ಟಣೆ ಹಾಗೂ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ಆಚರಿಸಬೇಕು.
ಕೀರ್ತನ ಗಾಯನ,ಸಾಹಸ ಕ್ರೀಡೆಗಳ ಪ್ರದರ್ಶನ,ಪ್ರತಿಭಾವಂತರಿಗೆ ಸನ್ಮಾನ ,ಕನಕದಾಸರು ಹಾಗೂ ಒನಕೆ ಓಬವ್ವ ವೇಷಭೂಷಣಗಳು, ಶಾಲಾ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ಮತ್ತಿತರ ಚಟುವಟಿಕೆಗಳನ್ನು ಏರ್ಪಡಿಸಬೇಕು.
ಜಯಂತಿ ಆಚರಣೆಯ ಸಿದ್ಧತೆಗಾಗಿ ವಿವಿಧ ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು.ಶಿಷ್ಟಾಚಾರ ಪಾಲನೆಯಲ್ಲಿ ಲೋಪಗಳಾಗಬಾರದು ಎಂದು ವಿಜಯಾ ಈ ರವಿಕುಮಾರ ಸೂಚಿಸಿದರು.
ವಿವಿಧ ತಾಲೂಕುಗಳ ಕನಕ ಮಹಾಸಭಾ ಹಾಗೂ ಛಲವಾದಿ ಮಹಾಸಭಾದ ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ,ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎನ್.ತ್ಯಾಗರಾಜು ಮತ್ತಿತರ ಅಧಿಕಾರಿಗಳು,ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

