ನ.11 ರಂದು ಸಂತ ಕನಕದಾಸ ಹಾಗೂ ವೀರ ವನಿತೆ ಒನಕೆ ಓಬವ್ವ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ: ಅಪರ ಜಿಲ್ಲಾಧಿಕಾರಿ ವಿಜಯಾ ಈ ರವಿಕುಮಾರ್

ಬೆಂ.ಗ್ರಾ.ಜಿಲ್ಲೆ: (ನ.05): ಇದೇ ತಿಂಗಳು 11 ರಂದು ದಾಸಶ್ರೇಷ್ಠ ಕನಕದಾಸರು ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಗಳನ್ನು ದೇವನಹಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಈ.ರವಿಕುಮಾರ ಹೇಳಿದರು.

ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಕನಕ ಜಯಂತಿ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮಗಳ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾಸಪಂಥದ ಮೇರುಸಾಧಕ ಕನಕದಾಸರು ಹಾಗೂ ವೀರವನಿತೆ ಒನಕೆ ಓಬವ್ವ ಅವರು ಕನ್ನಡ ನಾಡು,ನುಡಿಯ ಸಾಂಸ್ಕೃತಿಕ ಹಿರಿಮೆಯಾಗಿದ್ದಾರೆ.ಇದೇ ನವೆಂಬರ್ 11 ರಂದು ಈ ಇಬ್ಬರೂ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ದೇವನಹಳ್ಳಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು.ಅದೇ ಪ್ರಧಾನಮಂತ್ರಿಗಳು ಬೆಂಗಳೂರು ನಗರ ಹಾಗೂ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಆವರಣಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದರಿಂದ ಸಂಚಾರ ದಟ್ಟಣೆ ಹಾಗೂ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ಆಚರಿಸಬೇಕು.

ಕೀರ್ತನ ಗಾಯನ,ಸಾಹಸ ಕ್ರೀಡೆಗಳ ಪ್ರದರ್ಶನ,ಪ್ರತಿಭಾವಂತರಿಗೆ ಸನ್ಮಾನ ,ಕನಕದಾಸರು ಹಾಗೂ ಒನಕೆ ಓಬವ್ವ ವೇಷಭೂಷಣಗಳು, ಶಾಲಾ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ಮತ್ತಿತರ ಚಟುವಟಿಕೆಗಳನ್ನು ಏರ್ಪಡಿಸಬೇಕು.

ಜಯಂತಿ ಆಚರಣೆಯ ಸಿದ್ಧತೆಗಾಗಿ ವಿವಿಧ ಇಲಾಖೆಗಳಿಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು.ಶಿಷ್ಟಾಚಾರ ಪಾಲನೆಯಲ್ಲಿ ಲೋಪಗಳಾಗಬಾರದು ಎಂದು ವಿಜಯಾ ಈ ರವಿಕುಮಾರ ಸೂಚಿಸಿದರು.

ವಿವಿಧ ತಾಲೂಕುಗಳ ಕನಕ ಮಹಾಸಭಾ ಹಾಗೂ ಛಲವಾದಿ ಮಹಾಸಭಾದ ಪದಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ,ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎನ್.ತ್ಯಾಗರಾಜು ಮತ್ತಿತರ ಅಧಿಕಾರಿಗಳು,ಸಂಘಟನೆಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]