ದೊಡ್ಡಬಳ್ಳಾಪುರ, (ನ.05): ನಗರದ ಬಮೂಲ್ ಕಚೇರಿಯಲ್ಲಿ ಶನಿವಾರ, ತಾಲೂಕಿನ ಎಂಪಿಸಿಎಸ್ ಸದಸ್ಯರಿಗೆ ವಿವಿಧ ಪರಿಹಾರದ ಚೆಕ್ ಗಳನ್ನು ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ವಿತರಿಸಿದರು.
ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯರ ಮರಣ ಪರಿಹಾರ, ವೈದ್ಯಕೀಯ ವೆಚ್ಚ ಮರುಪಾವತಿ, ರಾಸುಗಳ ಮರಣದ ಪರಿಹಾರದ ಸುಮಾರು 5.9 ಲಕ್ಷ ರೂ ಚೆಕ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.
ಈ ವೇಳೆ ಎಂಪಿಸಿಎಸ್ ಮಾಜಿ ಅಧ್ಯಕ್ಷ ತಿ.ರಂಗರಾಜು, ಬಮೂಲ್ ಉಪ ವ್ಯವಸ್ಥಾಪಕ ಡಾ.ಎಲ್.ಬಿ.ನಾಗರಾಜು ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

