ಬೆಂಗಳೂರು(ನ.06): ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ.

ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಖರ್ಗೆ ಅವರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರಿ ವಿಮಾನ ನಿಲ್ದಾಣಕ್ಕೆ ಖರ್ಗೆ ಅವರು ಬಂದಿಳಿದರು.

ಅದ್ಧೂರಿ ಮೆರವಣಿಗೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಕರೆತರಲಾಯಿತು. ದಾರಿಯುದ್ದಕ್ಕೂ ಎನ್‍ಎಸ್‍ಯುಐ, ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿಗಳ ನಡೆಸಿ ಸ್ವಾಗತ ಕೋರಿದರು.
ಮಧ್ಯಾಹ್ನ 2 ಗಂಟೆಗೆ ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶದ ಅಂಗವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್‍ಗಳು ರಾರಾಜಿಸುತ್ತಿವೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
