ನವೆಂಬರ್ 20 ರಂದು ಬಳ್ಳಾರಿಯಲ್ಲಿ ಎಸ್.ಸ್ಟಿ ಮೋರ್ಚಾ ಸಮಾವೇಶ: ಸಿಎಂ ಬೊಮ್ಮಾಯಿ

ಬೆಂಗಳೂರು, (ನ.06): ಇದೇ  ನವೆಂಬರ್ 20 ರಂದು ಬಳ್ಳಾರಿಯಲ್ಲಿ ಎಸ್.ಟಿ ಮೋರ್ಚಾ ಸಮಾವೇಶ ಹಾಗೂ ನ.30 ರಂದು ಮೈಸೂರಿನಲ್ಲಿ ಎಸ್.ಸಿ ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಾಳೆಯಿಂದ ಜನಸಂಕಲ್ಪ ಯಾತ್ರೆ ಪುನಃ ಪ್ರಾರಂಭವಾಗಲಿದೆ. ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳು ಸತತ ವಾಗಿ ಕಾರ್ಯಕ್ರಮಗಳಿವೆ. ಡಿಸೆಂಬರ್ ವರೆಗೆ ಜನಸಂಕಲ್ಪ ಯಾತ್ರೆ ಮುಂದುವರೆಯಲಿದೆ.  ಅಭೂತಪೂರ್ವ ಬೆಂಬಲ ಎಲ್ಲೆಡೆ ದೊರೆಯುತ್ತಿದೆ. ಈ ಬಾರಿ ಮುಂಬೈ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದು,  ಇದು ನಮ್ಮ ಮುಂದಿನ ವಿಜಯಕ್ಕೆ ಪುಷ್ಟಿ ನೀಡುತ್ತಿದೆ ಎಂದರು. 

ನವೆಂಬರ್ 11 ರಂದು ರಾಜ್ಯಕ್ಕೆ  ಪ್ರಧಾನಿಗಳ ಭೇಟಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ರಾಜ್ಯ ಕ್ಕೆ ಆಗಮಿಸಿದ್ದು ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್ –  ಚೆನ್ನೈ – ಮೈಸೂರು- ಬೆಂಗಳೂರು  ರೈಲನ್ನು ಉದ್ಘಾಟಿಸಲಿದ್ದಾರೆ. ಇದು ಬಹಳ ದಿನಗಳ ನಮ್ಮ ಬೇಡಿಕೆಯಾದ  ಹೈಸ್ಪೀಡ್ ರೈಲನ್ನು ಪ್ರಧಾನಿಗಳು ಈಡೇರಿಸುತ್ತಿದ್ದಾರೆ. ಜೊತೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣದಲ್ಲಿ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಇದರ  ಅವಶ್ಯಕತೆ  ಕೂಡ ಇತ್ತು.

ಬೆಂಗಳೂರಿಗೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದು, 25 ಲಕ್ಷ ಜನರನ್ನು ನಿಭಾಯಿಸುವ ಸಾಮರ್ಥ್ಯ ವುಳ್ಳ, ನೂರು ಕೌಂಟರ್ ಗಳುಳ್ಳ  ಅಂತರರಾಷ್ಟ್ರೀಯ ಟರ್ಮಿನಲ್ ಉದ್ಘಾಟನೆಯಾಗುತ್ತಿದೆ. ಎರಡೂ ಟರ್ಮಿನಲ್ ಕೂಡಿದರೆ, ದೆಹಲಿಯ ನಂತರ ದೇಶದ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಕರ್ನಾಟಕ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರವಾಸೋದ್ಯಮ, ಕೈಗಾರಿಕೆ, ಐ.ಟಿ, ಬಿಟಿ, ಆರ್.ಅಂಡ್ ಡಿ ವಲಯಗಳಿಗೂ ದೊಡ್ಡ ಅನುಕೂಲ ವಾಗಲಿದೆ ಎಂದರು. 

ನಂತರ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣವಾಗುತ್ತಿದೆ. ಕೆಂಪೇಗೌಡರು ವಿಕಾಸಪುರುಷರು. ಹೀಗಾಗಿ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಇಡೀ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳಿಂದ ಉದ್ಘಾಟನೆಯಾಗುತ್ತಿರುವುದು ಅತ್ಯಂತ ಯೋಗ್ಯವಾಗಿದೆ. ನಂತರ ಸಾರ್ವಜನಿಕ ಕಾರ್ಯಕ್ರಮವಿರಲಿದೆ ಎಂದರು. 

ಸೋಲಾರ್ ಪರವಾನಗಿ ಬಗ್ಗೆ ತನಿಖೆ: ಹಿಂದಿನ ಸರ್ಕಾರದ ಅವಧಿಯಲ್ಲಿ ಖಾಸಗಿಯವರಿಗೆ ಸೋಲಾರ್ ನಿಂದ ವಿದ್ಯುತ್ ಉತ್ಪಾದನೆಗೆ ನೀಡಿರುವ ಪರವಾನಗಿಯಲ್ಲಿ ಆಗಿರುವ ಅವ್ಯವಹಾರವನ್ನು ಮುಚ್ಚಿಹಾಕಲು ಪ್ರಯತ್ನ ಮಾಡುತ್ತಿದ್ದಾರೆ. ಕೇವಲ 7 ಸೆಕೆಂಡಿನಲ್ಲಿ ಆನ್ ಲೈನ್ ಮೂಲಕ ನೀಡಿರುವ ಪಟ್ಟಿಯನ್ನು ನೀಡಿದರೆ ಯಾವ ರೀತಿ ಆಗಿದೆ ಎಂದು ತಿಳಿಯುತ್ತದೆ. ಅದರ ಬಗ್ಗೆ ತನಿಖೆ ಮಾಡಲಾಗುತ್ತಿದೆ ಎಂದರು. 

ಎಲ್ಲಾ ಆಯಾಮಗಳಲ್ಲಿ ತನಿಖೆ: ಶಾಸಕ ರೇಣುಕಾಚಾರ್ಯ ಅವರ ಸಹೋದರನ  ನಿಗೂಢ ಸಾವಿಗೆ ಸಂಬಂಧಿಸಿದಂತೆ ಶಾಸಕರೊಂದಿಗೆ ಮಾತನಾಡಿದ್ದು,ಅವರ ಪ್ರಕಾರ ಏನು ನಡೆದಿದೆ ಎಂದು ಮಾಹಿತಿಯನ್ನು ನೀಡಿ, ಸೂಕ್ತ ನಿರ್ದೇಶನವನ್ನು ಐ.ಜಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ನೀಡುವುದಾಗಿ ತಿಳಿಸಿದ್ದೇನೆ. ಮರಣೋತ್ತರ ಪರೀಕ್ಷೆಯಲ್ಲಿ ಬಹುತೇಕ ಸತ್ಯಾಂಶ ಹೊರಬರುತ್ತದೆ ನಂತರ ತನಿಖೆಯನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕೆಂದು ನಿರ್ಧರಿಸಲಾಗುತ್ತದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡಲಾಗುವುದು ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]