ಉಪ ಲೋಕಾಯುಕ್ತರ ಮುಂದೆ ಅಳಲು ತೋಡಿಕೊಂಡ ಸರ್ಕಾರಿ ಮಹಿಳಾ ಡಿಗ್ರಿ ವಿದ್ಯಾರ್ಥಿನಿಯರು…!

ಚಿಕ್ಕಬಳ್ಳಾಪುರ: ಶನಿವಾರದಿಂದ 3 ದಿನಗಳ ಕಾಲ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರರವರು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಇಂದು ಸಾರ್ವಜನಿಕರ ಕುಂದು, ಕೊರತೆ, ವಿಚಾರಣೆ ಸಭೆ ನಡೆಸಿದರು.

ಸಭೆಗೆ ಸರ್ಕಾರಿ ಮಹಿಳಾ ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯರು ಆಗಮಿಸಿ ತಮ್ಮ ಅಳಲು ತೋಡಿಕೊಂಡಿದ್ದು ಮನಮುಟ್ಟುವಂತಿತ್ತು.

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣಕ್ಕೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರರವರು ಆಗಮಿಸಿ ಸಾರ್ವಜನಿಕರಿಂದ ಕುಂದು, ಕೊರತೆ ಆಲಿಸುತ್ತಿದ್ದಾರೆಂಬುದನ್ನು ತಿಳಿದ ಚಿಕ್ಕಬಳ್ಳಾಪುರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಸಭೆಗೆ ಆಗಮಿಸಿ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟರು.

ಚಿಕ್ಕಬಳ್ಳಾಪುರ ನಗರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆಗಿ ದಶಕವೇ ಕಳೆದರೂ ಇದುವರೆಗೂ ಸೂಕ್ತ ಕಟ್ಟಡವಾಗಲೀ, ಕುಡಿಯುವ ನೀರು, ಶೌಚಾಲಯ, ವಿಶ್ರಾಂತಿ ತಾಣ, ಲೈಬ್ರರಿ ಸೇರಿದಂತೆ ಯಾವೊಂದು ಮೂಲಭೂತ ಸೌಕರ್ಯಗಳಿಲ್ಲ. ಇಲ್ಲಿನ ಜನಪ್ರತಿನಿಧಿಗಳು ಕಡೆಗಣಿಸಿದ್ದಾರೆ. ಉಪಲೋಕಾಯುಕ್ತರಾದ ತಾವಾದರೂ ನಮ್ಮ ಸಮಸ್ಯೆಯನ್ನು ಬಗೆಹರಿಸಿ ಎಂದು ಅವಲತ್ತುಕೊಂಡರು.

ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜು ಪ್ರಾರಂಭವಾದಾಗಿನಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೇ ಕೊಠಡಿ ಹಾಗೂ ಪಾಳುಬಿದ್ದ ಸ್ಥಿತಿಯಲ್ಲಿರುವ ನಗರದ ಸಿಟಿಜನ್ ಕ್ಲಬ್‌ನಲ್ಲಿ ವಿದ್ಯಾರ್ಥಿನಿಯರಿಗೆ ಪಾಠ, ಪ್ರವಚನಗಳು ನಡೆಯುತ್ತಿವೆ. ನೂತನ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ 2014ರಲ್ಲಿ ಆರಂಭವಾಗಿದೆ. ಅಮಾನಿ ಗೋಪಾಲಕೃಷ್ಣ ಕೆರೆಯ ಹಿನ್ನೀರಿನ ಅಂಗಳದಲ್ಲಿ ಕಾಲೇಜು ಕಾಮಗಾರಿ ನಡೆಯುತ್ತಿದೆ.

ಒಂದು ವರ್ಷದಲ್ಲಿ ಮುಗಿಯಬಹುದಾದ ಕಾಮಗಾರಿ 7-8 ವರ್ಷವಾದರೂ ಮುಗಿದಿಲ್ಲ. ಇದರಿಂದ ಬಡ ವಿದ್ಯಾರ್ಥಿನಿಯರು ಪಡಬಾರದ ಕಷ್ಟಪಡುತ್ತಿದ್ದಾರೆ. ವಿದ್ಯಾರ್ಥಿನಿಯರ ಸಮಸ್ಯೆಯನ್ನು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿಗಳ ಗಮನಕ್ಕೆ ತಂದು, ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರರವರು ಭರವಸೆ ನೀಡಿದರು. ಆದರೆ ವಿದ್ಯಾರ್ಥಿನಿಯರ ಸಮಸ್ಯೆ ಕೇಳಿದರೆ ಕರುಳು ಚುರುಕ್ ಎನ್ನುತ್ತೆ.

ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡೇ ಇರುವ ಚಿಕ್ಕಬಳ್ಳಾಪುರದಲ್ಲಿ ಸುಸಜ್ಜಿತವಾದ ಒಂದು ಸರ್ಕಾರಿ ಕಾಲೇಜು ಕಟ್ಟಡ ನಿರ್ಮಿಸಲು ಆಗಿಲ್ಲ. ಕಾಲೇಜು ಶಿಕ್ಷಣ ಇಲಾಖೆ ಹಾಗೂ ಕೆಲವು ಸಂಸ್ಥೆಗಳ ಸಿ.ಎಸ್.ಆರ್.ಅನುದಾನವನ್ನು ಬಳಸಿಕೊಂಡು ಕಾಲೇಜು ನಿರ್ಮಾಣ ಮಾಡಲು ಶಂಕುಸ್ಥಾಪನೆ ಮಾಡಲಾಗಿತ್ತು. ಆದರೆ ಸಿ.ಎಸ್.ಆರ್. ಹಣ ನೀಡುವುದಾಗಿ ಭರವಸೆ ನೀಡಿದ್ದ ಕೆಲವು ಸಂಸ್ಥೆಗಳು ಹಣ ಬಿಡುಗಡೆ ಮಾಡದ ಕಾರಣ ಕಾಮಗಾರಿ ಕುಂಠಿತಗೊಂಡಿದೆ.

ಇನ್ನು ಕಾಮಗಾರಿ ನಿರ್ವಹಿಸುತ್ತಿರುವ ಕೆ.ಆರ್.ಡಿ.ಎಲ್. ಇಂಜನಿಯರ್‌ಗಳು ಅವೈಜ್ಞಾನಿಕವಾಗಿ ಕಾಮಗಾರಿಯನ್ನು ನಿರ್ವಹಿಸುತ್ತಿರುವ ಕಾರಣ ವಿದ್ಯಾರ್ಥಿನಿಯರ ಕನಸು ನನಸಾಗುತ್ತಿಲ್ಲ.

ಇನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ರಸ್ತೆಗೆ ಹೊಂದಿಕೊಂಡಿರುವ ಕಾಮಗಾರಿ ಕುಂಟುತ್ತಿದ್ದರೂ ದೊಡ್ಡದೊಡ್ಡ ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಿರುವ ಅಧಿಕಾರಿಗಳು ಸಹಾ ಕುರುಡರಾಗಿದ್ದಾರಾ ಎಂದು ವಿದ್ಯಾರ್ಥಿನಿಯರು ಪ್ರಶ್ನಿಸುತ್ತಿದ್ದಾರೆ..

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]