ದೊಡ್ಡಬಳ್ಳಾಪುರ: ನವೆಂಬರ್ 8 ರಂದು ನಡೆಯಲಿರುವ ರಾಹುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ದೇವರ ದರ್ಶನ ಸಮಯ ಬದಲಾವಣೆ ಮಾಡಲಾಗಿದೆ.
ನವೆಂಬರ್ 08ರ ಬೆಳಿಗ್ಗೆ 6 ಗಂಟೆಗೆ ಅಭಿಷೇಕ ಹಾಗೂ 7.30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ಬೆಳಿಗ್ಗೆ 10.30ರಿಂದ ದೇವಾಲಯದ ಬಾಗಿಲು ಮುಚ್ಚಲಾಗುತ್ತದೆ.
ಮತ್ತೆ ರಾತ್ರಿ 7.30ಕ್ಕೆ ದೇವಾಲಯದ ಬಾಗಿಲು ತೆರೆದು ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

