ಬೆಂಗಳೂರು: ಇಂದಿನ ಮಾಧ್ಯಮ ಲೋಕದಲ್ಲಿ ಸುಳ್ಳುಸುದ್ದಿಗಳ ತಡೆ ಒಂದು ದೊಡ್ಡ ಸವಾಲು. ಅಂತೆಯೇ ಆಧುನಿಕ ಯುಗದಲ್ಲಿ ವಿಶ್ವಾಸಾರ್ಹತೆ ಹೆಚ್ಚು ಮಹತ್ವ ಪಡೆಯುತ್ತದೆ. ಸುಳ್ಳುಸುದ್ದಿಗಳನ್ನು ತಡೆಯುವ ನಿಟ್ಟಿನಲ್ಲಿ ಸುಳ್ಳುಸುದ್ದಿ ಬಿತ್ತರಿಸುತ್ತಿದ್ದ 200 ಯೂಟ್ಯೂಬ್ ಚಾನೆಲ್ ಗಳನ್ನು ನಿಷೇಧಿಸುವ ಮೂಲಕ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಂಡಿತು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗು ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಹಾಯಕ ಸಚಿವ ಡಾ.ಎಲ್.ಮುರುಗನ್ ಹೇಳಿದರು.
ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಖಾಸಗಿ ಸುದ್ದಿ ಚಾನೆಲ್ ನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಆಪ್ ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸ್ತುತ ದೇಶದಲ್ಲಿ ಒಟ್ಟು 900 ಖಾಸಗಿ ಚಾನೆಲ್ ಗಳು ಇವೆ. ಅದರಲ್ಲಿ 380 ಸುದ್ದಿ ಚಾನೆಲ್ ಗಳಿವೆ. ಮಾಧ್ಯಮಗಳ ಸಂಖ್ಯೆ ಹೆಚ್ಚಾಗಿದೆ ಆದರೆ, ಪ್ರಜಾಪ್ರಭುತ್ವ ಸುದೃಢವಾಗಿರಬೇಕಾದರೆ ಮಾಧ್ಯಮಗಳು ಹೊಣೆಗಾರಿಕೆಯಿಂದ ವರ್ತಿಸಬೇಕು.ಪ್ರಜಾಪ್ರಭುತ್ವದ ನಾಲ್ಕು ಸ್ತಂಭದಲ್ಲಿ ಒಂದಾದ ಮಾಧ್ಯಮ ರಂಗ ಸ್ವಯಂ ನಿಯಂತ್ರಣದ ಹಾಕಿಕೊಳ್ಳುವುದು ಸೂಕ್ತ ಎಂದರು.
ಪ್ರಧಾಮ ಮಂತ್ರಿ ನರೇಂದ್ರ ಮೋದಿಯವರು ನಾವೆಲ್ಲರೂ 2047ರ ಕಡೆಗೆ ಮುನ್ನಡೆಯುತ್ತಿದ್ದೇವೆ. ಈಗ ನಾವು ಸ್ವತಂತ್ರ್ಯದ ಅಮೃತಮಹೋತ್ಸವ ಆಚರಿಸುತ್ತಿದ್ದೇವೆ. ಪ್ರಸಾರ ಭಾರತಿ ಇದರ ಹಿನ್ನೆಲೆ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಧಾರಾವಾಹಿ ಪ್ರಸಾರ ಮಾಡುತ್ತಿದೆ. ಅದರಲ್ಲಿ ಕರ್ನಾಟಕದ ಆಜ್ಞಾತವೀರರ ಕುರಿತಾದ ಹೋರಾಟದ ಕತೆಯೂ ಒಳಗೊಂಡಿದೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ಹಾಗು ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

