ಸತೀಶ್ ಜಾರಕಿಹೊಳಿ ಹೇಳಿಕೆ: ಸಮಾಜದಲ್ಲಿ ಹುಳಿ ಹಿಂಡುವ ಕೆಲಸ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ, (ನ,07): ಶಾಸಕ ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಮೂಲಕ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಉಡುಪಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದೇಶದ್ರೋಹದ ಕೆಲಸ: ದೇಶದ ಜನರ ಭಾವನೆಗಳಿಗೆ ಧಕ್ಕೆ ಆಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದು, ಅರೆಬೆರೆಯ ಮತ್ತು ಆಳವಾದ ಅಧ್ಯಯನ ಇಲ್ಲದೆ ಕೇವಲ ಓಟಿಗಾಗಿ ತುಷ್ಟೀಯ ರಾಜಕಾರಣ ಮಾಡುತ್ತಿದ್ದಾರೆ. ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದೆಂಬ ಭ್ರಮೆಯಲ್ಲಿ ಇದ್ದಾರೆ. ಭಾರತದ ನಂಬಿಕೆಗಳ ಬುನಾದಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದಾದರೂ ದೇಶದಲ್ಲಿ ಆಂತರಿಕ ಕ್ಷೋಭೆಯನ್ನುನುಂಟು ಮಾಡುವುದು ದೇಶದ್ರೋಹದ ಕೆಲಸ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕು. ಕಾಂಗ್ರೆಸ್ ಪಕ್ಷ ಇದಕ್ಕೆ ಸಹಮತ ವ್ಯಕ್ತಪಡಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎಂದರು.

ಮೌನ ಯಾಕೆ: ಸಣ್ಣ ಸಣ್ಣ ವಿಚಾರಗಳಿಗೆ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಗುತ್ತಾರೆ. ಈಗ ಯಾಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು. ಅವರ ಮೌನ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಸಮ್ಮತಿ ಸೂಚಿಸುತ್ತದೆ. ಕಾಂಗ್ರೆಸ್ ಪಕ್ಷ ಬಹುಸಂಖ್ಯಾತ ಹಿಂದೂಗಳಿಗೆ ಧಕ್ಕೆಯಾದರೂ ಕೂಡ ಮಾತನಾಡುವುದಿಲ್ಲ ಎಂದರೆ ಅರ್ಥವೇನು ಎಂದು ಪ್ರಶ್ನಿಸಿದರು. 

ನೆಪ ಮಾತ್ರಕ್ಕಿರುವ ಅಸ್ತಿತ್ವವನ್ನು ಈ ದೇಶದಲ್ಲಿ ಕಾಂಗ್ರೆಸ್ ಕಳೆದುಕೊಳ್ಳಲಿದೆ. ಸತೀಶ್ ಜಾರಕಿಹೊಳಿ ಅವರು ಇಷ್ಟೆಲ್ಲಾ ಆದರೂ ಕೊಡ ತಮ್ಮ ವಾದವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ. ಕೂಡಲೇ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕು. ಮತ್ತು ಪಶ್ಚಾತ್ತಾಪ ಪಡಬೇಕು. ಇಲ್ಲದಿದ್ದರೆ ನೆಪ ಮಾತ್ರಕ್ಕಿರುವ ಅಸ್ತಿತ್ವವನ್ನು ಈ ದೇಶದಲ್ಲಿ ಕಾಂಗ್ರೆಸ್ ಕಳೆದುಕೊಳ್ಳಲಿದೆ.  ಕಾಂಗ್ರೆಸ್ ನ್ನು  ಸಮಗ್ರ ಜನತೆ ಮೂಲೆಯಲ್ಲಿ ಸ್ಥಾನ ತೋರಿಸುತ್ತಾರೆ. ಈ ಹೇಳಿಕೆ ಪೂರ್ವಾಗ್ರಹ ಪೀಡಿತ ಹೇಳಿಕೆ ಮಾತ್ರವಲ್ಲ ಯೋಜನಾಬದ್ದ ಹೇಳಿಕೆ ಎಂದರು.

ಪ್ರತಿಭಟನೆಯ ಜೊತೆಗೆ ಹೇಳಿಕೆಗಳನ್ನು ನಿಲ್ಲಿಸುವ ಕಾಲ: ಹಲವಾರು ಜನ ಹಲವಾರು ಪಕ್ಷದವರು ಬೇರೆ ಬೇರೆ ಸಂದರ್ಭಗಳಲ್ಲಿ ಹಿಂದೂ ಭಾವನೆಗಳನ್ನು, ವಿಚಾರ, ಪರಂಪರೆ ಗಳಿಗೆ ಧಕ್ಕೆಯಾಗುವ ರೀತಿಯಲ್ಲಿ, ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ನೀಡುವ ಹೇಳಿಕೆಗಳನ್ನು ಗಮನಿಸಿದಾಗ ಪ್ರತಿಭಟನೆಯ ಜೊತೆಗೆ ಇದನ್ನು ನಿಲ್ಲಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿಗಳು  ತಿಳಿಸಿದರು.

ತಪ್ಪು ಮಾಡದಿದ್ದರೆ ಭಯ ಯಾಕೆ: ಸಿಬಿಐ ಕಿರುಕುಳ ಬ್ಯೂರೋ ಆಫ್ ಇಂಡಿಯಾ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪು ಮಾಡದಿದ್ದರೆ ಭಯ ಯಾಕೆ ಪಡಬೇಕು. ಏನೇ ತನಿಖೆ ಬಂದರೂ ಸಿದ್ದ ಎಂದು ಒಂದೆಡೆ ಹೇಳುತ್ತಾರೆ, ಇನ್ನೊಂದೆಡೆ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರು. 

ಗಿಫ್ಟ್: ಕಾಂಗ್ರೆಸ್ ಸಮಾವೇಶದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೆಲುವಿನ ಉಡುಗೊರೆ ನೀಡುವುದಾಗಿ ಘೋಷಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಖರ್ಗೆ ಅವರು ಹಿಂದೂಗಳ ಬಗ್ಗೆ  ಎಂದು ಮಾತನಾಡಿದ್ದಾರೆ. ಅವರೂ ಇದರ ಭಾಗ. ಯಾರು ಯಾರಿಗೆ ಗಿಫ್ಟ್ ಕೊಡುತ್ತಾರೆ ನೋಡೋಣ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!