ನಾಡಪ್ರಭು ಕೆಂಪೇಗೌಡರ ರಥಕ್ಕೆ ಅದ್ಧೂರಿ ಬೀಳ್ಕೊಡುಗೆ

ಚಿಕ್ಕಬಳ್ಳಾಪುರ: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ “ಪವಿತ್ರ ಮಣ್ಣು (ಮೃತ್ತಿಕೆ) ಮತ್ತು ನೀರು ಸಂಗ್ರಹ ಮಾಡಿರುವ ಕೆಂಪೇಗೌಡ ರಥದ ವಾಹನಕ್ಕೆ  ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರು ಇಂದು ಜಿಲ್ಲಾಡಳಿತ ಭವನದ ಮುಂಭಾಗದಿಂದ ಭಕ್ತಿಪೂರ್ವಕವಾಗಿ ಬೀಳ್ಕೊಡುಗೆ  ನೀಡಿ ಪುತ್ಥಳಿ ಅನಾವರಣ ಸ್ಥಳಕ್ಕೆ ಕಳುಹಿಸಿ ಕೊಟ್ಟರು. 

ಈ ವೇಳೆ ಶುಭ ಕೋರಿ ಮಾತನಾಡಿದ ಅವರು, ನಾಡಪ್ರಭು ಕೆಂಪೇಗೌಡ ರಥ ವಾಹನವು ಮಾನ್ಯ ಜಿಲ್ಲಾ ಉಸ್ತುವಾರಿ  ಸಚಿವರಿಂದ ಚಾಲನೆಗೊಂಡು ಅಕ್ಟೋಬರ್ 25 ರಿಂದ ಈ ವರೆಗೆ  ಜಿಲ್ಲೆಯಾದ್ಯಂತ ಸಂಚರಿಸಿ 157 ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಜಿಲ್ಲೆಯ ಪ್ರಸಿದ್ಧ ಪಾರಂಪರಿಕ ಸ್ಥಳಗಳು ಮತ್ತು ಪುಣ್ಯ ಕ್ಷೇತ್ರಗಳಲ್ಲಿ ಪವಿತ್ರ ಮೃತ್ತಿಕೆ ಮತ್ತು ನೀರನ್ನು ಸಂಗ್ರಹಿಸಿದೆ. ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಈ ವಾಹನವನ್ನು ಕಳುಹಿಸಿಕೊಡಲಾಗುತ್ತಿದೆ.

ಪ್ರಮುಖವಾಗಿ ಜಿಲ್ಲೆಯ ಪ್ರಸಿದ್ಧ ಸ್ಥಳಗಳಾದ ವಿದುರಾಶ್ವತ್ಥ, ಕೈವಾರ, ರಂಗಸ್ಥಳ, ನಂದಿ, ಆಲಂಗಿರಿ, ಮುದ್ದೇನಹಳ್ಳಿ ಇನ್ನೂ ಮುಂತಾದ ಪುಣ್ಯ ಕ್ಷೇತ್ರಗಳಲ್ಲಿ ಮಣ್ಣು ಮತ್ತು ನೀರನ್ನು ಸಂಗ್ರಹಿಸಲಾಗಿದೆ. ಈ ಮೃತ್ತಿಕೆ ಮತ್ತು ನೀರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ 108 ಅಡಿಯ ಕಂಚಿನ ಪ್ರತಿಮೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ  ಉದ್ಯಾನವನ (ಥೀಮ್  ಪಾರ್ಕ್) ಕ್ಕೆ ಉಪಯೋಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಶಿವಶಂಕರ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು  ಸಿಬ್ಬಂದಿ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]