ಬೆಂ.ಗ್ರಾ.ಜಿಲ್ಲೆ, (ನ,08): ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿವೇತನ ಹಾಗೂ ರಾಜ್ಯ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ವೆಬ್‌ಸೈಟ್ https://ssp.karnataka.gov.in/ ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿದೆ.

ಪ್ರವರ್ಗ-1 ಮತ್ತು ಅಲೆಮಾರಿ/ಅರೆಅಲೆಮಾರಿ ಜನಾಂಗಗಳಿಗೆ ಸೇರಿದ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು. ತದನಂತರ ಇನ್ನುಳಿದ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಮೆರಿಟ್ ಆಧಾರದ ಮೇಲೆ ರಾಜ್ಯ ವಿದ್ಯಾರ್ಥಿವೇತನ ಮಂಜೂರು ಮಾಡಲಾಗುವುದು.
ಪ್ರವರ್ಗ-1, ಪ್ರವರ್ಗ-2ಎ, 3ಎ, 3ಬಿ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಒಂದನೇ ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
ರಾಜ್ಯ ಸರ್ಕಾರವು ಅಧಿಸೂಚಿಸಿರುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಹಾಗೂ ಕೇಂದ್ರ ಸರ್ಕಾರವು ಅಧಿಸೂಚಿಸಿರುವ ಇತರೆ ಹಿಂದುಳಿದ ವರ್ಗಗಳಡಿ ಬರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಸೌಲಭ್ಯಕ್ಕೆ ಅರ್ಹರಾಗುವುದಿಲ್ಲ.
ವಿದ್ಯಾರ್ಥಿವೇತನ ಸೌಲಭ್ಯದ ವಿವರ, ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು ಹಾಗೂ ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಥವಾ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಥವಾ ವೆಬ್‌ಸೈಟ್: www.backwardclasses.kar.nic.in, ಅಥವಾ ದೂ.ಸಂ.;: 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
