ನಾಡಪ್ರಭು ಕೆಂಪೇಗೌಡರ ಹೆಸರು ರಾಜಕೀಯಕ್ಕೆ ಬಳಕೆ ಅಕ್ಷಮ್ಯ: ಹೆಚ್.ಡಿ.ಕೆ ಟೀಕೆ

ಬೆಂಗಳೂರು: ರಾಜ್ಯ ಸರಕಾರ ಮತ್ತು ಬಿಜೆಪಿ ನಾಯಕರು ನಾಡಪ್ರಭು ಕೆಂಪೇಗೌಡರ ಹೆಸರನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅವರು ಏನು ಮಾಡುತ್ತಿದ್ದಾರೆ ಎನ್ನುವುದನ್ನು ಜನರು ಕೂಡ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಬಸವನಗುಡಿಯಲ್ಲಿ ಗುರುವಾರ ಜೆಡಿಎಸ್ ಕಚೇರಿಯನ್ನು ಉದ್ಘಾಟನೆ ಮಾಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿ, ಪ್ರತಿಮೆ ಸ್ಥಾಪನೆ ಮಾಡಿ ಒಕ್ಕಲಿಗರ ಮತ ಸೆಳೆಯಬಹುದು ಎಂದು ಬಿಜೆಪಿಯವರು ಲೆಕ್ಕಾಚಾರ ಮಾಡಿದ್ದಾರೆ. ಬಿಜೆಪಿ ನಾಯಕರು ಆ ರೀತಿ ಭ್ರಮೆಯಲ್ಲಿದ್ದರೆ ಜನರೇ ಆ ಭ್ರಮೆಯಿಂದ ಹೊರ ತರುತ್ತಾರೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

ಕೆಂಪೇಗೌಡ ಪ್ರತಿಮೆ‌ ಅನಾವರಣ ಬಿಜೆಪಿ ಸರ್ಕಾರದ ನಿಯೋಜಿತ ಕಾರ್ಯಕ್ರಮ. ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ, ಹೋಗುತ್ತಾರೆ ಅಷ್ಟೇ. ಇದಕ್ಕೆ ನಾನು ಹೆಚ್ಚು ಮಹತ್ವ ಕೊಡಲು ಹೋಗುವುದಿಲ್ಲ. ಮೋದಿ ಅವರನ್ನು ಕರೆತಂದು ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದರೆ ಒಕ್ಕಲಿಗರ ಮತಗಳು ಬರುತ್ತದೆಂದು ಬಿಜೆಪಿಯವರು ಭ್ರಮೆಯಲ್ಲಿದ್ದರೆ, ಜನರೇ ಅದರಿಂದ ಹೊರ ತರುತ್ತಾರೆ ಎಂದರು.

ಬೆಂಗಳೂರು ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದೇ ರೀತಿ ನಿರುದ್ಯೋಗ ಸಮಸ್ಯೆ ಇದೆ. ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತಾವಧಿಯಲ್ಲಿ ಬೆಂಗಳೂರಲ್ಲಿ ಹಲವಾರು ರೀತಿಯ ಅನಾಹುತ ಮಾಡಿದ್ದಾರೆ. ಅದನ್ನು ಸರಿಪಡಿಸುವ ಮೂಲಕ ಕೆಂಪೇಗೌಡರಿಗೆ ಗೌರವ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಧರ್ಮ, ಜಾತಿ ಬಿಟ್ಟರೆ ರಾಷ್ಟ್ರೀಯ ಪಕ್ಷಗಳಿಗೆ ಬೇರೆ ವಿಷಯ ಇಲ್ಲ: ಧರ್ಮ, ಜಾತಿ ಹೆಸರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಮನಸ್ಸನ್ನು ಕೆಡಿಸುತ್ತವೆ. ಆ ಎರಡೂ ಪಕ್ಷಗಳಿಗೆ ಅಭಿವೃದ್ಧಿ ಬೇಕಿಲ್ಲ ಎಂದರು.

ಹಿಂದೂ ಪದದ ಕುರಿತು ಶಾಸಕ ಸತೀಶ್ ಜಾರಕಿಹೊಳಿ ಅವರು ನೀಡಿರುವ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸೂಕ್ಷ್ಮ ವಿಚಾರ ಇಟ್ಟುಕೊಂಡು ಚುನಾವಣಾ ರಾಜಕೀಯ ಮಾಡುತ್ತಿವೆ. ಇದು ಸರಿಯಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಎಲ್ಲಾ ಅರಿವಿದ್ದರೂ ಜನರ ಸಮಸ್ಯೆ ಕೇಳಲು ಯಾರೂ ತಯಾರಿಲ್ಲ. ನಾನು ಹೊಡೆದಂಗೆ ಮಾಡ್ತೀನಿ, ನೀನು ಅತ್ತಂಗೆ ಮಾಡು ಎನ್ನುವಂಥ ನೀತಿ ಅನುಸರಿಸುತ್ತಿವೆ. ಇವರ ಯೋಗ್ಯತೆ ಏನು ಎನ್ನುವುದು ಜನರಿಗೆ ಗೊತ್ತಿದೆ ಎಂದು ಕಿಡಿಕಾರಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!