
ದೊಡ್ಡಬಳ್ಳಾಪುರ, (ನ,10): ಬೆಂಗಳೂರು – ಹಿಂದೂಪುರ ನಡುವಿನ ಬಾಶೆಟ್ಟಿಹಳ್ಳಿ ಮೇಲ್ಸೇತುವೆ ಕೆಳಭಾಗದಲ್ಲಿ ಯುವಕನೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ ಘಟನೆ ಗುರುವಾರ ಸಂಭವಿಸಿದೆ.

ಮೃತನನ್ನು ಗೌರಿಬಿದನೂರು ತಾಲೂಕಿನ ನಗರಗೆರೆ ಮೂಲದ ನರೇಂದ್ರ (22 ವರ್ಷ) ಎಂದು ಗುರುತಿಸಲಾಗಿದ್ದು, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಆದಿತ್ಯ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದನೆಂಬ ಮಾಹಿತಿ ಲಭ್ಯವಾಗಿದೆ ಎಂದು ರೈಲ್ವೆ ಪೊಲೀಸರು ಹರಿತಲೇಖನಿಗೆ ತಿಳಿಸಿದ್ದಾರೆ.

ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
-->
