ಬೆಂಗಳೂರು: ಭಾರತೀಯ ವಾಯುಪಡೆಯು ವಿಜ್ಞಾನ ಮತ್ತು ವಿಜ್ಞಾನೇತರ ಸ್ಕೀಮ್ ಗಳಿಗಾಗಿ ಅಗ್ನಿಪಥ್ ಯೋಜನೆಯಡಿ ವಾಯುಸೇನೆಯಲ್ಲಿ ಆಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಹಾಗೂ ಜನವರಿ 2023 ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಯುವಕ, ಯುವತಿಯರಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 27 ಜೂನ್ 2002 ರಿಂದ 27 ಡಿಸೆಂಬರ್ 2005 ರ ನಡುವೆ (ಎರಡೂ ದಿನಾಂಕಗಳನ್ನು ಒಳಗೊಂಡಂತೆ) ಜನಿಸಿದವರಾಗಿರಬೇಕು. ನೋಂದಣಿಗಾಗಿ https://agnipathvayu.cdac.in ವೆಬ್ ಸೈಟ್ ಗೆ ಭೇಟಿ ನೀಡಿ, ಆನ್ ಲೈನ್ ಅರ್ಜಿ ನೋಂದಣಿಗೆ ಕೊನೆಯ ನವೆಂಬರ್ 23.

ಹೆಚ್ಚಿನ ವಿವರಗಳಿಗಾಗಿ https://careerindianairforce.cdac.in ವೆಬ್ ಸೈಟ್ ಗೆ ಭೇಟಿ ನೀಡಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
