ಕೆಂಪೇಗೌಡರ ಪ್ರತಿಮೆ ಅನಾವರಣ: ಪ್ರಧಾನಿ ಮೋದಿ ಕಾರ್ಯ ಪ್ರಶಂಸಿಸಿ, ದೇವೇಗೌಡರನ್ನ ಸ್ಮರಿಸಿದ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು, (ನ,11): ವಿದೇಶಿ ನೇರ  ಬಂಡವಾಳ ಹೂಡಿಕೆಯಲ್ಲಿ ದೇಶದ ಶೇ.25 ರಷ್ಟು ಪಾಲು ಹೊಂದಿರುವ ಕರ್ನಾಟಕ ಹಾಗೂ ಬೆಂಗಳೂರು ಅಭಿವೃದ್ಧಿಯ ಮುಂಚೂಣಿ ಪಥದಲ್ಲಿವೆ.ನಾಡಪ್ರಭು ಕೆಂಪೇಗೌಡರ ಕಲ್ಪನೆಯ ಬೆಂಗಳೂರಿನ ಸಮಗ್ರ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಇಂದು ಟರ್ಮಿನಲ್ 2 ಹಾಗೂ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಭವ್ಯ  ಪ್ರಗತಿ ಪ್ರತಿಮೆ ಲೋಕಾರ್ಪಣೆ ನಂತರ ನಡೆದ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು.

ವಾಣಿಜ್ಯ,ಸಂಸ್ಕೃತಿ,ಪರಂಪರೆ,ಆಡಳಿತದ ಸಮರ್ಪಕ ಸಂಯೋಜನೆಯಿಂದ ಕೆಂಪೇಗೌಡರು ನಗರ ನಿರ್ಮಾಣಕ್ಕೆ ಬುನಾದಿ ಹಾಕಿದರು. ಇಂದು ಆಡಳಿತ, ವ್ಯಾಪಾರದ ರೂಪುರೇಷೆ ಬದಲಾದರೂ ಕೂಡ ಬೆಂಗಳೂರಿನ ಆರ್ಥಿಕತೆ ನಿರಂತರವಾಗಿ ಅಭಿವೃದ್ಧಿಯಾಗುತ್ತಲೇ ಸಾಗಿದೆ. ಭಾರತದ ಮೊದಲ ಮೇಕ್ ಇನ್ ಇಂಡಿಯಾ ವಂದೇ ಭಾರತ ರೈಲು ಕರ್ನಾಟಕದಿಂದ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್ 2 ಸಾಮಾಜಿಕ ಜಾಲತಾಣಗಳು ಹಾಗೂ ಭಾವಚಿತ್ರಗಳಲ್ಲಿರುವದಕ್ಕಿಂತಲೂ ಸುಂದರವಾಗಿದೆ. ಈ ನಾಡಿನ ಜನರ ಹಳೆಯ ಬೇಡಿಕೆ ಈಗ ಈಡೇರಿದೆ. ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿಯ ಪ್ರತಿಮೆ ಲೋಕಾರ್ಪಣೆ ಮಾಡಿ, ಅವರ ಪಾದಗಳಿಗೆ ಜಲಾಭಿಷೇಕ ಮಾಡುವ ಅವಕಾಶ ದೊರೆತಿರುವುದು ತಮ್ಮ ಪಾಲಿನಸೌಭಾಗ್ಯವಾಗಿದೆ ಎಂದರು.

ಸ್ಟಾರ್ಟ್ ಅಪ್‌ಗಳ ಸ್ಫೂರ್ತಿಯ ಚಿಲುಮೆ: ಭಾರತವನ್ನು ಸಶಕ್ತಗೊಳಿಸಲು ಸ್ಟಾರ್ಟ್ ಅಪ್‌ಗಳು ರಹದಾರಿಯಾಗಿವೆ.ಬೆಂಗಳೂರು ಸ್ಟಾರ್ಟ್ ಅಪ್ ಯೋಜನೆಗಳ ಸ್ಫೂರ್ತಿಯ ಚಿಲುಮೆಯಾಗಿವೆ. ಯುವಶಕ್ತಿ, ಯುವಭಾರತದ ಪ್ರತಿಬಿಂಬ ಬೆಂಗಳೂರು. ವಂದೇ ಭಾರತ ಕೇವಲು ರೈಲು ಮಾತ್ರವಲ್ಲ ಅದು ನವಭಾರತದ ನಿರ್ಮಾಣದ ಪ್ರತೀಕ. ಈ ಹಿಂದೆ ಭಾರತದ ರೈಲುಗಳು ನಿಧಾನಗತಿಯಲ್ಲಿ ಚಲಿಸುತ್ತಿದ್ದವು ಈಗ ಅವುಗಳು ಶಕ್ತಿಯಿಂದ ಓಡುತ್ತಿವೆ.400 ಕ್ಕೂ ಹೆಚ್ಚು ಹೊಸ ವಂದೇ ಭಾರತ್ ರೈಲುಗಳು ಭಾರತೀಯ ರೇಲ್ವೆಗೆ ಹೊಸ ಆಯಾಮ ನೀಡಿವೆ‌. ಸರಕು,ಸಾಗಣೆಗೆ ಅರ್ಪಿತವಾದ ಪ್ರತ್ಯೇಕ ಮಾರ್ಗ ನಿರ್ಮಿಸಲಾಗುತ್ತಿದೆ.ಹೊಸ ಹೊಸ ವಲಯಗಳನ್ನು ರೈಲು ಸಂಪರ್ಕಿಸುತ್ತಿದೆ. ಬೆಂಗಳೂರಿನಲ್ಲಿ ದೇಶದ ಮೊದಲ ಹವಾನಿಯಂತ್ರಿತ ಸರ್.ಎಂ.ವಿಶ್ವೇಶರಯ್ಯ ರೈಲು ನಿಲ್ದಾಣ ನಿರ್ಮಾಣವಾಗುತ್ತಿದೆ. ಯಶವಂತಪುರ ಹಾಗೂ ಕಂಟೋನ್ಮೆಂಟ್ ರೈಲು ನಿಲ್ದಾಣಗಳ ಸಮಗ್ರ ಸುಧಾರಣೆಗೆ ಒತ್ತು ನೀಡಲಾಗಿದೆ ಎಂದರು.

ವೈಮಾನಿಕ ಸಂಪರ್ಕಜಾಲವು ವಿಸ್ತಾರವಾಗುತ್ತಿದೆ.ವಿಮಾನಯಾನ ಮಾರುಕಟ್ಟೆಯಲ್ಲಿ ಭಾರತವು ಜಗತ್ತಿನಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ.2014 ರ ಪೂರ್ವದಲ್ಲಿ ದೇಶದಲ್ಲಿ 70 ವಿಮಾನ ನಿಲ್ದಾಣಗಳಿದ್ದವು ಈಗ ಅವು ದುಪ್ಪಟ್ಟಾಗಿದ್ದು  140 ಕ್ಕೆ ಏರಿವೆ. ಪ್ರಧಾನ ಮಂತ್ರಿ ಗತಿ ಶಕ್ತಿ,ಪಿಎಂ ಸ್ವನಿಧಿ, ಪಿಎಂ ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ದೇಶ ಹಾಗೂ ರಾಜ್ಯದ ಪ್ರಗತಿಯನ್ನು ನಾಡಿನ ಜನರ ಮುಂದೆ ವಿವರಿಸಿದರು.

ಉದ್ದೇಶಿತ ರಾಷ್ಟ್ರೀಯ ಲಾಜಿಸ್ಟಿಕ್ ನೀತಿಯು ಸಾರಿಗೆ ವೆಚ್ಚ ಕಡಿಮೆಗೊಳಿಸಿ, ಹೊಸತನ, ಅನ್ವೇಷಣೆಗೆ ದಾರಿ ಮಾಡಿಕೊಡಲಿದೆ. ಭೌತಿಕ ಮೂಲಸೌಕರ್ಯಗಳ ಅಭಿವೃದ್ಧಿಯೊಂದಿಗೆ ಸಾಮಾಜಿಕ ಮೂಲಸೌಕರ್ಯಗಳ ವಿಕಸನಕ್ಕೂ ಕರ್ನಾಟಕದ ಡಬಲ್ ಇಂಜಿನ್ ಸರ್ಕಾರ ಆದ್ಯತೆ ನೀಡಿದೆ‌.

ಕನಕದಾಸರು,ಓಬವ್ವ ಸ್ಮರಣೆ: ಭಗವದ್ ಶಕ್ತಿ ಹಾಗೂ ಸಾಮಾಜಿಕ ಶಕ್ತಿಯ ಜೋಡಣೆಯ ಪ್ರೇರಣೆ ಸಂತ ಕನಕದಾಸರಿಂದ ದೊರೆತಿದೆ.ಶ್ರೀಕೃಷ್ಣನ ಭಕ್ತರಾಗಿದ್ದ ಅವರು “ಕುಲ ಕುಲವೆಂದು ಹೊಡೆದಾಡದಿರಿ” ಎಂದು ಸಹಬಾಳ್ವೆಯ ಸಂದೇಶ ಸಾರಿದರು. ರಾಮಧಾನ್ಯ ಚರಿತೆ ಕೃತಿಯ ಮೂಲಕ ರಾಗಿಯ ಮಹತ್ವದ ಜೊತೆಗೆ ಸಿರಿಧಾನ್ಯಗಳು ಹಾಗೂ ಸಾಮಾಜಿಕ ಸಂದೇಶ ಹಾಗೂ ವೀರ ವನಿತೆ ಒನಕೆ ಓಬವ್ವನ ಸಾಹಸ ಮನೋಭಾವವನ್ನು ಪ್ರಧಾನಿ ಪ್ರಶಂಸಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಮಾತನಾಡಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತಾವಧಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಟರ್ಮಿನಲ್ ಉದ್ಘಾಟನೆಯಾಗಿತ್ತು. ಇದೀಗ ಪ್ರಧಾನಿ ಮೋದಿಯವರು ಎರಡನೇ ಟರ್ಮಿನಲ್ ಲೋಕಾರ್ಪಣೆಯಾಗಿದೆ.ಮೆಟ್ರೋ ,ಉಪನಗರ ರೈಲು ಯೋಜನೆಗಳು ಬೆಂಗಳೂರಿನ ಸರ್ವಾಂಗೀಣ ವಿಕಾಸಕ್ಕೆ ಮುನ್ನುಡಿ ಬರೆಯುತ್ತಿವೆ.ಬೆಳಗಾವಿಯ ಸಾಮಾನ್ಯ ನಾಗರಿಕರಾದ ಶ್ರೀಠಾಣೇದಾರ್ ಎಂಬುವರು ಅಮೇರಿಕದ ಕಾಂಗ್ರೆಸ್ಸಿಗೆ ಸಂಸದರಾಗಿ ಚುನಾಯಿತರಾಗಿರುವುದು ಸಮಸ್ತ ಕನ್ನಡಿಗರು ಹಾಗೂ ಭಾರತೀಯರು ಹೆಮ್ಮೆಪಡಬೇಕಾದ ಸಂಗತಿಯಾಗಿದೆ ಎಂದರು.

ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ ಮಾತನಾಡಿ, ಕರೊನಾ ತುತ್ತ ತುದಿಯಲ್ಲಿದ್ದ ಸಂಕಷ್ಟದ ದಿನಗಳಲ್ಲಿ 2020 ರ ಜೂನ್ ತಿಂಗಳಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ಸಂಸ್ಕೃತಿ, ಪರಂಪರೆ, ಆಧ್ಯಾತ್ಮ ಅರಿತವರು ಭವಿಷ್ಯ ಸೃಷ್ಟಿಸಬಲ್ಲರು. ಜ್ಞಾನದ ಜೊತೆ ಕರ್ಮ ಜ್ಞಾನವೂ ಬೇಕು. ಭಾರತ ಉಳಿದರೆ ಎಲ್ಲರೂ ಉಳಿಯುತ್ತಾರೆ. ಭಾರತ ಅಳಿದರೆ ಎಲ್ಲರೂ ಅಳಿಯುತ್ತಾರೆ. ಕರೊನಾ ಸಂಕಷ್ಟದ ಕಾಲವನ್ನು ಭಾರತ ಸಮರ್ಥವಾಗಿ ಎದುರಿಸಿ ದೇಶ ಮುನ್ನಡೆಯುತ್ತಿದೆ. ಸುಮಾರು 500 ವರ್ಷಗಳ ಹಿಂದೆ ಯಾವುದೇ ಜಾತಿ,ಪಂಥಗಳಿಗೆ ಸೀಮಿತವಾಗದೇ ದೂರದೃಷ್ಟಿಯಿಂದ ಮಾನವ ಸಂಪನ್ಮೂಲದ ಸದ್ವಿನಿಯೋಗ ಹಾಗೂ ಕೌಶಲ್ಯಗಳನ್ನು ಆಧರಿಸಿ ನಾಡಪ್ರಭು ಕೆಂಪೇಗೌಡರು ನಿರ್ಮಿಸಿದ 64 ಮಾರುಕಟ್ಟೆಗಳು ಬೆಂಗಳೂರನ್ನು ಆರ್ಥಿಕ,ವಾಣಿಜ್ಯ ಶಕ್ತಿ ಕೇಂದ್ರವಾಗಿಸಿವೆ. ಪ್ರಧಾನಿ ಮೋದಿಯವರೂ ಕೂಡ ಅಂತಹ ದೂರದೃಷ್ಟಿಯ ನೇತಾರರಾಗಿದ್ದಾರೆ ಎಂದರು.

ಪ್ರಗತಿಯ ಸಂಕೇತವಾಗಿರುವ ಕೆಂಪೇಗೌಡರ ಪ್ರತಿಮೆಯನ್ನ ಅನಾವರಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದರು. ಮೋದಿ ಅವರ ಕಾರ್ಯವೈಖರಿಯನ್ನು ಶ್ಲಾಘಿಸುತ್ತಲೇ 2020 ರ ಜೂನ್ 27 ರಂದು ಕೆಂಪೇಗೌಡರ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಸ್.ಎಂ.ಕೃಷ್ಣ, ಬಿ.ಎಸ್.ಯಡಿಯೂರಪ್ಪರನ್ನ ಸ್ಮರಿಸಿ ಭಾಷಣ ಮುಗಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಬೆಂಗಳೂರು -ಮೈಸೂರು ಹಾಗೂ ಬೆಂಗಳೂರು-ಚೆನ್ನೈ ಮಹಾನಗರಗಳಿಗೆ ಸಂಪರ್ಕಿಸುವ ವಂದೇಭಾರತ್ ರೈಲು ನೀಡಿದ್ದಾರೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಎರಡನೇ ಟರ್ಮಿನಲ್ ಲೋಕಾರ್ಪಣೆ ಮೂಲಕ ಇದು ದೇಶದ ಎರಡನೇ ಅತಿದೊಡ್ಡ ವಿಮಾನ ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿದೆ ಎಂದರು.

ವಿಜಯನಗರದ ಕಾಲದ ಸುವರ್ಣಯುಗದ ದರ್ಶನವನ್ನು ನಾಡಪ್ರಭು ಕೆಂಪೇಗೌಡರಯ ಯೋಜನಾಬದ್ಧ ನಗರ ನಿರ್ಮಾಣದ ಮೂಲಕ ತಮ್ಮ ದೂರದೃಷ್ಟಿಯ ಕನಸುಗಳನ್ನು ಸಾಕಾರಗೊಳಿಸಿದರು. ಅವರ ವಿಚಾರ, ರೀತಿ, ನೀತಿಗಳ ಧಾರೆಯಲ್ಲಿ ನಾಡು ಕಟ್ಟಲು ಸರ್ಕಾರ ಸಂಕಲ್ಪ ಮಾಡುತ್ತದೆ. ದೇಶದ ಹತ್ತು ಹಲವು ಸಮಸ್ಯೆಗಳನ್ನು ಪರಿಹರಿಸಿ ಅಭಿವೃದ್ಧಿಯಲ್ಲಿ ಸರ್ವರಿಗೂ ಸಮಪಾಲು ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಹೆಮ್ಮೆಯಿಂದ ಮುನ್ನಡೆಯುತ್ತಿದೆ. ನವಭಾರತ ನಿರ್ಮಾಣಕ್ಕಾಗಿ ಕನ್ನಡ ನಾಡಿನ ಅಭಿವೃದ್ಧಿಗೆ ಪ್ರಧಾನಿ ಮೋದಿಯವರು ಅನೇಕ ಕೊಡುಗೆಗಳನ್ನು ನಿರಂತರವಾಗಿ ನೀಡುತ್ತಿರುವುದನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೆಮ್ಮೆಯಿಂದ ಸ್ಮರಿಸಿದರು.

ಇದೇ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡರ ಜೊತೆಗೆ ಸಂತ ಕನಕದಾಸ ಹಾಗೂ ವೀರ ವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ವೇದಿ ಕೆಯಲ್ಲಿ ಅವರ ಭಾವಚಿತ್ರಗಳಿಗೆ ಪ್ರಧಾನಿಯವರು ಗೌರವ ಸಲ್ಲಿಸಿದರು‌. ಪ್ರಧಾನ ಮಂತ್ರಿಯವರಿಗೆ ಪ್ರಗತಿ ಪ್ರತಿಮೆಯ ಬೆಳ್ಳಿಯ ಪ್ರತಿಕೃತಿ ನೀಡಿ ಮುಖ್ಯಮಂತ್ರಿಯವರು ಗೌರವಿಸಿದರು. ಕೆಂಪೇಗೌಡರ ಕುರಿತ ಕಿರು ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು‌.

ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್,ಕೇಂದ್ರ ಆದಿಚುಂಚನಗಿರಿ ನಿರ್ಮಲಾನಂದ ಸ್ವಾಮೀಜಿ, ನಂಜಾವಧೂತ ಸ್ವಾಮೀಜಿ, ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಭಗವಂತ್ ಖೂಬಾ,ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಸದಾನಂದಗೌಡ, ಸಚಿವರಾದ ಅರಗ ಜ್ಞಾನೇಂದ್ರ, ಸಿ.ಎನ್.ಅಶ್ವತ್ಥನಾರಾಯಣ, ಆರ್.ಅಶೋಕ, ನಾರಾಯಣಗೌಡ, ಸುನೀಲ್‌ಕುಮಾರ್, ಬಿ.ಎ.ಬಸವರಾಜ, ಕೆ‌.ಗೋಪಾಲಯ್ಯ, ಮುನಿರತ್ನ, ಎಂ.ಟಿ.ಬಿ.ನಾಗರಾಜ, ವಿ.ಸೋಮಣ್ಣ, ಡಾ.ಕೆ.ಸುಧಾಕರ್, ಎಸ್.ಟಿ.ಸೋಮಶೇಖರ್ ಅವರು ವೇದಿಕೆಯಲ್ಲಿದ್ದರು.

ಗಮನಸೆಳೆದ ಕಲಾಪ್ರದರ್ಶನ: ಕಾರ್ಯಕ್ರಮಕ್ಕೂ ಮುನ್ನ ವಿವಿಧ ಕಲಾತಂಡಗಳ ಕಲಾವಿದರು ಪ್ರದರ್ಶಿಸಿದ ನಾಡಪ್ರಭು ಕೆಂಪೇಗೌಡರ ಬದುಕು, ಸಾಧನೆಗಳ ಕುರಿತ ನೃತ್ಯರೂಪಕ, ನಾಟಕ, ಜನಪದ ಹಾಗೂ ಶಾಸ್ತ್ರೀಯ ಸಂಗೀತ, ಕನ್ನಡ ನಾಡಗೀತೆಗಳು ಗಮನ ಸೆಳೆದವು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!