ದೊಡ್ಡಬಳ್ಳಾಪುರ, (ನ,11): ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ದ್ವಿಚಕ್ರ ವಾಹನ ಸವಾರರಿಬ್ಬರು ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ತಾಲೂಕಿನ ಹಿಂದೂಪುರ ರಸ್ತೆಯಲ್ಲಿನ ಮಾಕಳಿ ಸಮೀಪ ಸಂಭವಿಸಿದೆ.

ಶುಕ್ರವಾರ ಸಂಜೆ ಗೌರಿಬಿದನೂರು ಕಡೆಯಿಂದ ಬಂದ ದ್ವಿಚಕ್ರ ವಾಹನ ಸವಾರರು, ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಾದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮೃತರನ್ನು ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24 ವರ್ಷ), ನಿಖಿಲ್ (19 ವರ್ಷ) ಎಂದು ಗುರುತಿಸಲಾಗಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
