ಬೆಂಗಳೂರು, (ನ,12): ದೇವನಹಳ್ಳಿಯಲ್ಲಿ ಶುಕ್ರವಾರ ನಡೆದ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎಂಬ ಆರೋಪಕ್ಕೆ ಬಿಜೆಪಿ ಸಾಕ್ಷಿ ಸಮೇತ, ತೀಕ್ಷ್ಣ ಪ್ರತ್ಯುತ್ತರ ನೀಡಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಬಿಜೆಪಿ ಕರ್ನಾಟಕ, ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಶ್ರೀ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಶ್ರೀ @BSBommai ಅವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ ಜೆಡಿಎಸ್ ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ.
ಇದಷ್ಟೇ ಅಲ್ಲ, ಕನ್ನಡದ ಅಸ್ಮಿತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಈ ಮಣ್ಣಿಗೆ ಸೇವೆ ಸಲ್ಲಿಸಿದ ಸಾಧಕರಾದಿಯಾಗಿ ನಮ್ಮ ರಾಜ್ಯದ ಕಟ್ಟ ಕಡೆಯಲ್ಲಿರುವವರನ್ನೂ ಮರೆಯದೇ, ಹಿಂಬಾಲಿಸಿ ಗುರುತಿಸಿದ್ದು ಬಿಜೆಪಿ.
ಕುಟುಂಬವನ್ನೇ ಪಕ್ಷವನ್ನಾಗಿಸಿಕೊಂಡ ಜೆಡಿಎಸ್‌ಗೆ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂಬುದು ಯಾವತ್ತಿಗೂ ಬಿಡಿಸಲಾಗದ ಒಗಟು ಎಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

