ದೊಡ್ಡಬಳ್ಳಾಪುರ, (ನ,13): ತಾಲೂಕಿನ ಆರೂಢಿ ಗ್ರಾಮದಲ್ಲಿ ಭಕ್ತ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಬೆಳ್ಳಿ ಪಲ್ಲಕಿಯಲ್ಲಿ ಕನಕದಾಸರ ಭಾವಚಿತ್ರವನ್ನು ಗ್ರಾಮದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಉದ್ದಕ್ಕೂ ವೀರಗಾಸೆ ಕುಣಿತ ಹಾಗೂ ವಾದ್ಯಗಳು ಮೆರವಣಿಗೆಯ ಶೋಭೆ ಹೆಚ್ಚಿಸಿದವು. ಮೆರವಣಿಗೆಯಲ್ಲಿ ಭಾಗವಹಿಸಿದೆಲ್ಲರು ಕುಣಿದು ಕುಪ್ಪಳಿಸಿದರು.

ತಾಪಂ ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣಕುಮಾರ್ ಮಾತನಾಡಿ, ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ದತಿಯನ್ನು ಹೋಗಲಾಡಿಸಲು ಸಮಾಜದಲ್ಲಿ ಏಕತೆ, ಸಹೋದರತೆ ತರಲು ಕನಕದಾಸರ ಜೀವನ ಹಾಗೂ ಕೀರ್ತನೆಗಳು ಸ್ಫೂರ್ತಿಯಾಗಿವೆ ಎಂದು ತಿಳಿಸಿದರು.
ಈ ವೇಳೆ ಗ್ರಾಪಂ ಅಧ್ಯಕ್ಷ ನರಸಿಂಹರಾಜು, ಸದಸ್ಯರಾದ ರಂಗಾಚಾರಿ, ನವೀನ್ ಕುಮಾರ್, ಮುಖಂಡರಾದ ರಾಮಕೃಷ್ಣಪ್ಪ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
