ಕಲಬುರಗಿ (ಸೇಡಂ), (ನ.14): ಹಾಲಿನ ದರ ಏರಿಕೆ ಬಗ್ಗೆ ಈ ತಿಂಗಳ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.

ಅವರು ಇಂದು ಸೇಡಂನಲ್ಲಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯಿಸಿದರು.

ಕಳೆದ ಹಲವಾರು ತಿಂಗಳಿನಿಂದ ಚರ್ಚೆಯಾಗುತ್ತಿದ್ದು, ಈ ತಿಂಗಳ 20ನೇ ತಾರೀಖಿನ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.
ಇದಕ್ಕೂ ಮುನ್ನ ನಂದಿನಿ ಪ್ರತಿ ಲೀಟರ್ ಹಾಲು ಮತ್ತು ಮೊಸರಿನ ದರ 3 ರೂಪಾಯಿ ಏರಿಕೆ ಮಾಡಿ ಕೆಎಂಎಫ್ ಆದೇಶ ಹೊರಡಿಸಿತ್ತು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
