ದೊಡ್ಡಬಳ್ಳಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆವತಿಯಿಂದ 2022-23ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳನ್ನು ನವೆಂಬರ್ 16 ರಂದು ಬಾಶೆಟ್ಟಿಹಳ್ಳಿಯ ಅಜಾಕ್ಸ್ ಸರ್ಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ ತಿಳಿಸಿದ್ದಾರೆ.

ತಾಲೂಕಿನ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳಿಂದ ಶಿಕ್ಷಕ/ಶಿಕ್ಷಕಿಯರು ಈ ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಆರ್.ರಂಗಪ್ಪ ಮನವಿ ಮಾಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಜೇತರಾಗುವ ಸ್ಪರ್ಧಿಗಳಿಗೆ ನಗದು ಬಹುಮಾನ ಹಾಗೂ ಹಾಜರಾತಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದುದೆಂದು ಅವರು ತಿಳಿಸಿದ್ದಾರೆ.
ಸ್ಪರ್ಧೆಗಳು: ಭಕ್ತಿಗೀತೆ, ಆಶುಭಾಷಣ ಸ್ಪರ್ಧೆ – ಪ್ರಬಂಧ ಸ್ಪರ್ಧೆ (ಕನ್ನಡ ಮಾಧ್ಯಮದಲ್ಲಿ ಮಾತ್ರ), ಸ್ಥಳದಲ್ಲಿ ಪಾಠೋಪಕರಣ ತಯಾರಿಕೆ ಸ್ಪರ್ಧೆ, ಸ್ಥಳದಲ್ಲಿ ಚಿತ್ರ ಬರೆಯುವ ಸ್ಪರ್ಧೆ, ಕ್ವಿಜ್ ರಸಪ್ರಶ್ನೆ( ಸಾಮಾನ್ಯ ಜ್ಞಾನ), ರಸಪ್ರಶ್ನೆ (ವಿಜ್ಞಾನ).
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
