ಬೆಂ.ಗ್ರಾ.ಜಿಲ್ಲೆ, (ನ.14): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಿಮ್ಹಾನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಯುವಜನರ ಮಾನಸಿಕ ಆರೋಗ್ಯವನ್ನು ಸಧೃಡಗೊಳಿಸಲು ಯುವಸ್ಪಂದನ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲು ಗೌರವಧನ ಆಧಾರದ ಮೇರೆಗೆ ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಹತೆಗಳು:
• ಯುವ ಪರಿವರ್ತಕರ ಹುದ್ದೆಗೆ ಮೊದಲನೆ ಆದ್ಯತೆಯನ್ನು ಜಿಲ್ಲೆಯ ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನವರಿಗೆ ನೀಡಲಾಗುವುದು. ಈ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿರುತ್ತದೆ.
• ಯುವ ಪರಿವರ್ತಕರ ಹುದ್ದೆಗೆ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
• ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೊಮೀತಿಯು 18 ರಿಂದ 35 ವರ್ಷದೊಳಗಿರಬೇಕು.
• ಅರ್ಜಿ ಸಲ್ಲಿಸಲು ಅಭ್ಯರ್ಥಿಗಲು ಬಯೋಡೇಟಾದೊಂದಿಗೆ ಆಧಾರ್ ಕಾಡ್ & ಪೋಟೋ ಮತ್ತು ಅಂಕಪಟ್ಟಿಯೊಂದಿಗೆ ಸಲ್ಲಿಸುವುದು.
ಆಸಕ್ತ ಆಭ್ಯರ್ಥಿಗಳು ದಿನಾಂಕ : 23.11.2022 ರಂದು ಬೆಳಿಗ್ಗೆ 11.00 ಗಂಟೆಗೆ ಅರ್ಜಿಯೊಂದಿಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ : 112, 1ನೇ ಮಹಡಿ, ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಕಛೇರಿಗೆ ಹಾಜರಾಗುವುದು.
ಹೆಚ್ಚಿನ ಮಾಹಿತಿಗಾಗಿ 9845608598 / 080-29787443 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

