ಬೆಂಗಳೂರು: ಕಳೆದ ತಿಂಗಳು 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ಮತ್ತೆ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಂಚಾರ ವಿಭಾಗದ ಮುಖ್ಯಸ್ಥರಾಗಿ ಅಬ್ದುಲ್ ಸಲೀಂ ವರ್ಗಾವಣೆ ಮಾಡಲಾಗಿದೆ. ಉಮೇಶ್ ಕುಮಾರ್ ಅವರನ್ನು ಆಡಳಿತ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ದಿವ್ಯಾಜ್ಯೋತಿ ರಾಯ್ ಅವರನ್ನು ಮಾನವ ಹಕ್ಕುಗಳ ಆಯೋಗ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.
ರವಿಕಾಂತೇಗೌಡ ಅವರನ್ನು ಸಿಐಡಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಲೋಕೇಶ್ ಕುಮಾರ್ ಅವರನ್ನು ಬಳ್ಳಾರಿ ಐಜಿ ಆಗಿ ವರ್ಗಾವಣೆ ಮಾಡಲಾಗಿದೆ. ರಮಣ್ ಗುಪ್ತಾ ಅವರನ್ನು ಬೆಂಗಳೂರು ಇಂಟಲಿಜೆನ್ಸ್ ಇಲಾಖೆಗೆ ವರ್ಗಾವಣೆ, ಚಂದ್ರಗುಪ್ತ ಅವರನ್ನು ಮಂಗಳೂರು ಪಶ್ಚಿಮ ವಲಯ ಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಶರಣಪ್ಪ ಅವರನ್ನು ಜಂಟಿ ಪೊಲೀಸ್ ಆಯುಕ್ತ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.
ಅನುಚೇತ್ ಅವರನ್ನು ಜಂಟಿ ಪೊಲೀಸ್ ಆಯುಕ್ತ ಸಂಚಾರ ವಿಭಾಗಕ್ಕೆ ವರ್ಗಾವಣೆ ಮಾಡಿದ್ದು, ರವಿ ಡಿ ಚೆನ್ನಣ್ಣ ನವರ್ ಅವರನ್ನು ಕಿಯೋನಿಕ್ಸ್ ನಿರ್ದೇಶಕನಾಗಿ ವರ್ಗಾವಣೆ ಮಾಡಿದ್ದಾರೆ. ರಮೇಶ್ ಅವರನ್ನು ಮೈಸೂರು ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

