ರಸ್ತೆ ಗುಂಡಿಗೆ ಬಲಿಯಾದ ಯೋಧ.!: ಕರ್ನಾಟಕದ ಕಳಪೆ ರಸ್ತೆಗಳಿಗೆ ಪರಿಹಾರವೇ ಇಲ್ಲವೇ..? – ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು, (ನ.15): ರಾಜ್ಯಾದ್ಯಂತ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಗೆ ಬಲಿ ಆಗುವ ಸರಣಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ. ಮಂಡ್ಯದಲ್ಲಿ ರಸ್ತೆಗೆ ನಿವೃತ್ತ ಯೋಧರೊಬ್ಬರು ಬಲಿಯಾಗಿರುವುದು ನನಗೆ ತೀವ್ರ ದುಃಖ ಉಂಟು ಮಾಡಿದೆ. ಕರ್ನಾಟಕದ ಕಳಪೆ ರಸ್ತೆಗಳಿಗೆ ಪರಿಹಾರವೇ ಇಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸೇನೆಯಿಂದ ಇತ್ತೀಚೆಗಷ್ಟೇ ನಿವೃತ್ತಿ ಆಗಿದ್ದ ಕುಮಾರ್ (38ವರ್ಷ) ಎಂಬ ಯೋಧರು ಮಂಡ್ಯದ ಕಾರಿಮನೆ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ರಸ್ತೆಗುಂಡಿಗೆ ಬಿದ್ದೊಡನೆ ಅವರ ಮೇಲೆ ಲಾರಿ ಹರಿದು ಕೊನೆಯುಸಿರೆಳೆದಿರುವುದು ಈ ವ್ಯವಸ್ಥೆಯ ಕರಾಳತೆಗೆ ಹಿಡಿದ ಕನ್ನಡಿ ಎಂದವರು ಆರೋಪಿಸಿದ್ದಾರೆ.

ಪೊಲೀಸ್ ತರಬೇತಿ ಪಡೆಯುತ್ತಿದ್ದ ಕುಮಾರ್ ಅವರು, ಬದುಕಿನಲ್ಲಿ ಅರ್ಥಪೂರ್ಣ ಕನಸುಗಳನ್ನು ಕಟ್ಟಿಕೊಂಡಿದ್ದರು. ತಮ್ಮ ತಂದೆಯವರ ಜತೆ ಸಾತನೂರು ಗ್ರಾಮಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಆ ವೃದ್ಧ ತಂದೆಗೆ ಆಸರೆಯಾಗಿದ್ದ ಪುತ್ರ ಗುಂಡಿಯಿಂದ ಜೀವ ಕಳೆದುಕೊಂಡಿದ್ದು ಕರ್ನಾಟಕದ ಕಳಪೆ ರಸ್ತೆಗಳಿಗೆ ಹಿಡಿದ ಕನ್ನಡಿ.

ಕಣ್ಮುಂದೆಯೇ ಜೀವ ಬಿಟ್ಟ ಪುತ್ರನ ಪಾರ್ಥೀವ ಶರೀರದ ಮುಂದೆ ಗೋಳಾಡುತ್ತಿದ್ದ ಆ ವೃದ್ಧ ತಂದೆಯನ್ನು ಕಂಡು ನನ್ನ ಮನಸ್ಸಿಗೆ ಆಘಾತವಾಗಿದೆ. ಇನ್ನೆಷ್ಟು ತಂದೆ ತಾಯಂದಿರು ಇಂಥ ಗುಂಡಿಗಳಿಂದ ಅನಾಥರಾಗಬೇಕು?

ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲ.

ಯೋಧರ ದುರಂತ ಸಾವಿಗೆ ಕಾರಣವಾದ ರಸ್ತೆಯೂ ಸೇರಿ ಮಂಡ್ಯ ನಗರಸಭೆ ವ್ಯಾಪ್ತಿಯ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ನಾನು ಮುಖ್ಯಮಂತ್ರಿ ಆಗಿದ್ದಾಗ ಬಿಡುಗಡೆ ಮಾಡಿದ್ದೆ. ದುರಂತ ಎಂದರೆ, ನನ್ನ ಸರಕಾರವನ್ನು ಆಪರೇಷನ್ ಕಮಲದ ಮೂಲಕ ಉರುಳಿಸಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರ ಆ 50 ಕೋಟಿ ರೂ. ಹಣವನ್ನು ಕೂಡಲೇ ಹಿಂಪಡೆಯಿತು.

ರಾಜಕೀಯ ಕಾರಣಕ್ಕೆ ಹಣ ವಾಪಸ್ ಪಡೆದ ರಾಜ್ಯ ಬಿಜೆಪಿ ಸರಕಾರವು ರಸ್ತೆಗಳಲ್ಲಿ ಮುಗ್ದ ಜನರ ಹೆಣಗಳನ್ನು ನೋಡಿ ಮೆರೆಯುತ್ತಿದೆ. ಇದು ಅಮಾನುಷ. ಸರಕಾರವು ನೊಂದ ಕುಟುಂಬಕ್ಕೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು.

ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ಸಿಗಲಿ, ದುಃಖತಪ್ತ ಕುಟುಂಬಕ್ಕೆ ನೋವು ಭರಿಸುವ ಆ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!