ದೊಡ್ಡಬಳ್ಳಾಪುರ: ನಗರದ ಕೆಎಸ್ಆರ್ಟಿಸಿ ನಿಲ್ದಾಣದ ಸಮೀಪದಲ್ಲಿನ ಹಳೇ ಸರ್ಕಾರಿ ಆಸ್ಪತ್ರೆಯ ಬಾಗಿಲಿನ ಬೀಗಿ ಮುರಿದು ಕಂಪ್ಯೂಟರ್, ಯುಪಿಎಸ್ ಬ್ಯಾಟಿರಿಗಳು ಆಮಲ್ಲಜನಕ ಯಂತ್ರಗಳು ಸೇರಿದಂತೆ ಹಲವಾರು ಉಪಕರಣಗಳನ್ನು ಕಳವು ಮಾಡಲಾಗಿದೆ. ಕಳ್ಳರ ಕೈಚಳಕ ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

ಡಿ.ಕ್ರಾಸ್ ಸಮೀಪ ಹೊಸ ಆಸ್ಪತ್ರೆ ಕಟ್ಟಡ ನಿರ್ಮಾಣವಾದ ನಂತರ ಹಳೇ ಆಸ್ಪತ್ರೆ ಕಟ್ಟಡವನ್ನು ತಾಲ್ಲೂಕು ಆರೋಗ್ಯ ಇಲಾಖೆಯ ಕಚೇರಿ ಕಾರ್ಯನಿರ್ವಹಣೆಗೆ ಬಳಸಿಕೊಳ್ಳಲಾಗಿದೆ.

ನಗರದ ಹೃದಯ ಭಾಗದಲ್ಲಿನ ಈ ಕಟ್ಟಡದಲ್ಲಿ ಆರು ತಿಂಗಳಿಂದ ಈಚೆಗೆ ಮೂರು ಬಾರಿ ಕಳವು ನಡೆದಿದೆ. ಆದರೆ ಇದುವರೆಗೂ ಒಂದು ಪ್ರಕರಣದಲ್ಲೂ ಆರೋಪಿಗಳು ಪತ್ತೆಯಾಗಿಲ್ಲ. ಹೀಗಾಗಿ ಕಚೇರಿಯಲ್ಲಿ ಯಾವುದೇ ವಸ್ತುಗಳು, ದಾಖಲಾತಿಗಳು ಇಡಲು ಸಹ ಭಯಪಡುವಂತಾಗಿದೆ ಎಂದು ಇಲ್ಲಿನ ಸಿಬ್ಬಂದಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
