
ದೊಡ್ಡಬಳ್ಳಾಪುರ, (ನ16): ದೇವಾಲಯದ ಬಾಗಿಲಿಗೆ ಹಾಕಲಾಗಿದ್ದ ಬೀಗ ಮುರಿದಿರುವ ಕಳ್ಳರು, ದೇವಾಲಯದಲ್ಲಿನ ಹುಂಡಿಯಲ್ಲಿದ್ದ ಕಾಣಿಕೆ ಹಣವನ್ನು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಹೆಗ್ಗಡಿಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಹೆಗ್ಗಡಿಹಳ್ಳಿ ಗ್ರಾಮದ ಪ್ರಸಿದ್ಧ ಶ್ರೀ ತಿರುಮಲ ಲಕ್ಷ್ಮೀವೆಂಕಟರಮಣ ಸ್ವಾಮಿ ದೇವಾಲಯದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಮುರಿದಿರುವ ಕಳ್ಳರು, ಕಾಣಿಕೆ ಹುಂಡಿಯಲ್ಲಿ ಭಕ್ತರು ಅರ್ಪಿಸಿದ್ದ ಸುಮಾರು ಒಂದು ಲಕ್ಷ ಮೊತ್ತದ ಹಣವನ್ನು ಅಪಹರಿಸಿದ್ದಾರೆಂದು ಗ್ರಾಮಸ್ಥರು ದೂರಿದ್ದಾರೆ.

ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
