ಮತದಾರರ ಪಟ್ಟಿ ಪರಿಷ್ಕರಣೆ “ಕಾಂತಾರ” ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯಲ್ಲ – ಸಿದ್ದರಾಮಯ್ಯ

ಬೆಂಗಳೂರು, (ನ.17): ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿಗಳು, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ.  

ಮುಖ್ಯಮಂತ್ರಿಗಳು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ?  ಎಂದು ಪ್ರಶ್ನಿಸಿದ್ದಾರೆ.

ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು?  ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ. 

ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ? 

ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ?  

ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ? ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? 

ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು “ಕೆಜಿಎಫ್” ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, “ಕಾಂತಾರ” ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ ಮಾಂಗಲ್ಯ ಸರ ಕಸಿದ ದುಷ್ಕರ್ಮಿಗಳು

ದೊಡ್ಡಬಳ್ಳಾಪುರ: ಹಾಡಹಗಲೇ 2 ಮನೆ ಬೀಗ ಒಡೆದು ಒಡವೆ, ನಗದು ಕಳ್ಳತನ..! ಮಹಿಳೆಯ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಮನೆ ಬೀಗ ಒಡೆದು, ಒಡವೆ, ನಗದು ( jewellery, cash) ಕಳ್ಳತನ ನಡೆಸಿರುವ ಪ್ರಕರಣಗಳು ವರದಿಯಾಗಿದ್ದು, ತಾಲೂಕಿನ ಜನರನ್ನು ಆತಂಕಕ್ಕೆದೂಡಿದೆ.

[ccc_my_favorite_select_button post_id="121201"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!