ಬೆಂ.ಗ್ರಾ. ಜಿಲ್ಲೆ, (ನ.19): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ನವೆಂಬರ್ 19 ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಆರ್.ಲತಾ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ, ಕಸಬಾ ಹೋಬಳಿಯ, ವಡ್ಡರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
ಅದರಂತೆಯೇ ದೇವನಹಳ್ಳಿ ತಾಲ್ಲೂಕಿನ ತಹಶೀಲ್ದಾರ್ ಶಿವರಾಜ್ ಅವರು ದೇವನಹಳ್ಳಿ ತಾಲ್ಲೂಕು, ಚನ್ನರಾಯಪಟ್ಟಣ ಹೋಬಳಿಯ, ಗಂಗವಾರ ಚೌಡಪ್ಪನಹಳ್ಳಿ ಗ್ರಾಮದಲ್ಲಿ, ನೆಲಮಂಗಲ ತಾಲ್ಲೂಕಿನ ತಹಶೀಲ್ದಾರ್ ಮಂಜುನಾಥ್.ಕೆ ಅವರು ನೆಲಮಂಗಲ ತಾಲ್ಲೂಕು, ತ್ಯಾಮಗೊಂಡ್ಲು ಹೋಬಳಿಯ, ಕಳಲುಘಟ್ಟ ಗ್ರಾಮದಲ್ಲಿ ಹಾಗೂ ಹೊಸಕೋಟೆ ತಾಲ್ಲೂಕಿನ ತಹಶೀಲ್ದಾರ್ ಮಹೇಶ್‌ಕುಮಾರ್.ಕೆ.ಎಂ. ಅವರು ಹೊಸಕೋಟೆ ತಾಲ್ಲೂಕು, ಸೂಲಿಬೆಲೆ ಹೋಬಳಿಯ, ಕಂಬಳಿಪುರ ಗ್ರಾಮದಲ್ಲಿ, ಎಲ್ಲಾ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಗ್ರಾಮ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

