ಬೆಂ.ಗ್ರಾ.ಜಿಲ್ಲೆ, (ನ.19): ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಪುರಸ್ಕೃತ ಅಭಿವೃದ್ಧಿ ಯೋಜನೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ ನವೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಲಿದೆ.
ಸಭೆಗೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಮಾಹಿತಿ ಹಾಗೂ ವರದಿಗಳೊಂದಿಗೆ ಸಭೆಗೆ ಹಾಜರಿರಲು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

