ಹರಿತಲೇಖನಿ ದಿನಕ್ಕೊಂದು ಕಥೆ: ಹೋಲಿಕೆಯ ಬದುಕು

ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ..ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ.

ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು.

ಆ ರೀತಿಯ ಸಂದೇಶವನ್ನು ನೀಡುವ ಒಂದು ಒಳ್ಳೆಯ ಕಥೆ ಸದ್ಯಕ್ಕೆ ವೈರಲ್ ಆಗಿದೆ. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ ಈ ಕಥೆಯಲ್ಲಿ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು.

ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ. ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು.

ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು. 

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ.

ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು  ನಮಗೆ ನೆನಪಿಸುತ್ತದೆ. 

ಕೃಪೆ: kannada+. ಸಂಗ್ರಹ: ನರಸಿಂಹಮೂರ್ತಿ ಬರಗೂರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!